ADVERTISEMENT

ರಜನಿಕಾಂತ್‌ ಆಸ್ಪತ್ರೆಯಿಂದ ಬಿಡುಗಡೆ

ಏಜೆನ್ಸೀಸ್
Published 27 ಡಿಸೆಂಬರ್ 2020, 11:23 IST
Last Updated 27 ಡಿಸೆಂಬರ್ 2020, 11:23 IST
 ಸೂಪರ್‌ಸ್ಟಾರ್ ರಜನಿಕಾಂತ್
ಸೂಪರ್‌ಸ್ಟಾರ್ ರಜನಿಕಾಂತ್   
""

ಹೈದರಾಬಾದ್‌: ತಮಿಳು ಚಿತ್ರರಂಗದ ಸೂಪರ್‌ಸ್ಟಾರ್ ರಜನಿಕಾಂತ್ ಆರೋಗ್ಯ ಸ್ಥಿತಿ ಸುಧಾರಿಸಿದ್ದು, ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ತೀವ್ರ ರಕ್ತದೊತ್ತಡದ ಸಮಸ್ಯೆಯಿಂದಾಗಿ ಅವರು ಡಿಸೆಂಬರ್‌ 25ರಂದು ಇಲ್ಲಿನ ಅಪೊಲೊ ಆಸ್ಪತ್ರೆಗೆ ದಾಖಲಾಗಿದ್ದರು.

ಅವರಲ್ಲಿ ರಕ್ತದೊತ್ತಡ ಸ್ಥಿರವಾಗಿದ್ದು, ಆರೋಗ್ಯ ಸುಧಾರಿಸಿದೆ ಎಂದು ಅಪೊಲೊ ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ. ಒಂದು ವಾರ ಸಂಪೂರ್ಣ ವಿಶ್ರಾಂತಿ ಮತ್ತು ರಕ್ತದೊತ್ತಡದ ಮೇಲೆ ನಿಗಾವಹಿಸುವುದು, ದೈಹಿಕಶ್ರಮ ವಹಿಸದಿರುವುದು ಹಾಗೂ ಒತ್ತಡಕ್ಕೆ ಒಳಗಾಗಬಾರದು ಎಂದು ಸಲಹೆ ನೀಡಲಾಗಿದೆ.

ಸನ್ ಪಿಕ್ಚರ್ಸ್ ನಿರ್ಮಾಣದ 'ಅಣ್ಣಾತೆ' ಎಂಬ ತಮಿಳು ಚಿತ್ರದ ಚಿತ್ರೀಕರಣಕ್ಕಾಗಿ ಅವರು ಡಿಸೆಂಬರ್ 13 ರಿಂದ ಹೈದರಾಬಾದ್‌ನಲ್ಲಿ ಬೀಡುಬಿಟ್ಟಿದ್ದಾರೆ. ಚಿತ್ರೀಕರಣ ತಂಡದಲ್ಲಿ ನಾಲ್ವರು ಸಿಬ್ಬಂದಿಗೆ ಕೋವಿಡ್‌-19 ದೃಢಪಟ್ಟ ಬೆನ್ನಲ್ಲೇ ರಜನಿಕಾಂತ್ ಪರೀಕ್ಷೆಗೆ ಒಳಗಾಗಿದ್ದರು. ವರದಿ ನೆಗೆಟಿವ್ ಬಂದಿದ್ದರೂ ಅವರು ಪ್ರತ್ಯೇಕ ವಾಸದಲ್ಲಿದ್ದರು.

ADVERTISEMENT

2021ರ ಜನವರಿಯಲ್ಲಿ ರಜನಿಕಾಂತ್‌ ನೇತೃತ್ವದ ಹೊಸ ರಾಜಕೀಯ ಪಕ್ಷಕ್ಕೆ ಚಾಲನೆ ಸಿಗಲಿದ್ದು, ಡಿಸೆಂಬರ್‌ 31ರಂದು ಅಧಿಕೃತ ಪ್ರಕಟಣೆ ಹೊರ ಬೀಳುವ ಸಾಧ್ಯತೆಯಿದೆ. ಮುಂದಿನ ವರ್ಷ ತಮಿಳುನಾಡು ವಿಧಾನಸಭಾ ಚುನಾವಣೆ ನಡೆಯಲಿದೆ.

ಆಸ್ಪತ್ರೆಯಿಂದ ಪತ್ರಿಕಾ ಪ್ರಕಟಣೆ

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.