
ನಟ ರಿಷಬ್ ಶೆಟ್ಟಿ ದಂಪತಿ, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್
ಚಿತ್ರ: ಇನ್‌ಸ್ಟಾಗ್ರಾಮ್
ಕಾಂತಾರ ಯಶಸ್ಸಿನ ಬೆನ್ನಲ್ಲೆ ನಟ ರಿಷಬ್ ಶೆಟ್ಟಿ ಹಾಗೂ ಪತ್ನಿ ಪ್ರಗತಿ ಶೆಟ್ಟಿ ಅವರು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರನ್ನು ಭೇಟಿಯಾಗಿದ್ದಾರೆ.
ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರನ್ನು ಭೇಟಿಯಾದ ಫೋಟೊಗಳನ್ನು ನಟ ರಿಷಬ್ ಶೆಟ್ಟಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
ರಿಷಬ್ ಶೆಟ್ಟಿ ಅವರು ಪೋಸ್ಟ್ ಜೊತೆಗೆ ‘ಗೋವಾ, ಸಿನಿಮಾ, ಅಭಿವೃದ್ಧಿ ಮತ್ತು ಸಂಸ್ಕೃತಿ ಬಗ್ಗೆ ನಮ್ಮ ಸಂಭಾಷಣೆ ಅದ್ಭುತವಾಗಿತ್ತು’ ಎಂದು ಬರೆದುಕೊಂಡಿದ್ದಾರೆ.
ಇನ್ನು, ನಟ ರಿಷಬ್ ಶೆಟ್ಟಿ ಹಾಗೂ ಪತ್ನಿ ಪ್ರಗತಿ ಅವರಿಗೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಸನ್ಮಾನ ಮಾಡಿ, ದೀಪವನ್ನು ಉಡುಗೊರೆಯಾಗಿ ನೀಡಿದ್ದಾರೆ.
ನಟ ರಿಷಬ್ ಶೆಟ್ಟಿ ಅವರು ಹಂಚಿಕೊಂಡ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು, ಈ ಚಿತ್ರಗಳನ್ನು ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.