ಮುಂಬೈ: ನಟ ಸೈಫ್ ಅಲಿ ಖಾನ್ ಅವರಿಗೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು ಅವರು ಉತ್ತಮವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಜೀವಕ್ಕೆ ಯಾವುದೇ ಅಪಾಯ ಇಲ್ಲ ಎಂದು ಸೈಫ್‌ಗೆ ಚಿಕಿತ್ಸೆ ನೀಡುತ್ತಿರುವ ಮುಂಬೈನ ಲೀಲಾವತಿ ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.
ಗುರುವಾರ ತಡರಾತ್ರಿ ಬಾಂದ್ರಾದ ಮನೆಯಲ್ಲಿ ದುಷ್ಕರ್ಮಿಯಿಂದ ಸೈಫ್ ಅಲಿಖಾನ್ ಅವರು ಚೂರಿ ಇರಿತಕ್ಕೆ ಒಳಗಾಗಿದ್ದರು. ಅವರ ಬೆನ್ನು, ಕುತ್ತಿಗೆ ಹಾಗೂ ದೇಹದ ಇತರ ಕೆಲವೆಡೆ ಆರು ಗಾಯಗಳಾಗಿದ್ದವು.
ಸೈಫ್ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಅವರನ್ನು ಭೇಟಿ ಮಾಡಲು ಇಂದು ಯಾರನ್ನೂ ಬಿಡುವುದಿಲ್ಲ. ಶಸ್ತ್ರಚಿಕಿತ್ಸೆ ಆಗಿರುವುದರಿಂದ ಅವರಿಗೆ ಸೋಂಕು ತಗುಲುವ ಸಾಧ್ಯತೆ ಇದೆ. ಒಟ್ಟು ಮೂರು ಶಸ್ತ್ರಚಿಕಿತ್ಸೆ ನಡೆದಿವೆ ಎಂದು ವೈದ್ಯರು ಹೇಳಿದ್ದಾರೆ.
'ಸದ್ಗುರು ಶರಣ್' ಅಪಾರ್ಟ್‌ಮೆಂಟ್‌ನಲ್ಲಿ ಕಳ್ಳತನಕ್ಕೆ ಯತ್ನಿಸಿದ್ದ ಎನ್ನಲಾದ ದುಷ್ಕರ್ಮಿಯೊಬ್ಬ, ಚಾಕುವಿನಿಂದ ಸೈಫ್‌ಗೆ ಹಲವು ಸಲ ಇರಿದಿದ್ದ. ಆತ ದೊಣ್ಣೆ ಹಾಗೂ ಹರಿತವಾದ ಆಯುಧದೊಂದಿಗೆ ಪರಾರಿಯಾಗುತ್ತಿರುವ ದೃಶ್ಯಗಳು ಕಟ್ಟಡದಲ್ಲಿರುವ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ.
ಈ ಕುರಿತು ಮುಂಬೈ ಪೊಲೀಸರು ಒಬ್ಬ ಶಂಕಿತ ಆರೋಪಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಇನ್ನು ಸೈಫ್ ಅವರ ಯೋಗಕ್ಷೇಮ ವಿಚಾರಿಸಲು ಬಾಲಿವುಡ್ ಮಂದಿ ಹಾಗೂ ಅವರ ಸಂಬಂಧಿಕರು ತಂಡೋಪತಂಡವಾಗಿ ಲೀಲಾವತಿ ಆಸ್ಪತ್ರೆಯತ್ತ ಧಾವಿಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.