ADVERTISEMENT

ನಟ ಸಲ್ಮಾನ್ ಖಾನ್ ಬಾವ ಆಯುಷ್‌ಗೆ ಬಿಷ್ಣೋಯಿ ಗ್ಯಾಂಗ್‌ನಿಂದ ಜೀವ ಬೆದರಿಕೆ

ಪಿಟಿಐ
Published 12 ಫೆಬ್ರುವರಿ 2026, 2:19 IST
Last Updated 12 ಫೆಬ್ರುವರಿ 2026, 2:19 IST
<div class="paragraphs"><p>ಆಯುಷ್ ಶರ್ಮಾ&nbsp;ಮತ್ತು ಸಲ್ಮಾನ್ ಖಾನ್</p></div>

ಆಯುಷ್ ಶರ್ಮಾ ಮತ್ತು ಸಲ್ಮಾನ್ ಖಾನ್

   

ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರ ತಂಗಿ ಗಂಡ (ಬಾವ) ನಟ ಆಯುಷ್ ಶರ್ಮಾ ಅವರಿಗೆ ಇ–ಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಟ ರಣವೀರ್ ಸಿಂಗ್ ಅವರಿಗೆ ವ್ಯಾಟ್ಸ್‌ಆ್ಯಪ್‌ ಮೂಲಕ ಬೆದರಿಕೆ ಬಂದ ಒಂದು ದಿನದ ಬಳಿಕ ಆಯುಷ್ ಶರ್ಮಾಗೆ ಬೆದರಿಕೆ ಸಂದೇಶ ಕಳುಹಿಸಲಾಗಿದೆ. ಆಯುಷ್‌ಗೆ ಬೆದರಿಕೆ ಸಂದೇಶ ಕಳುಹಿಸಿದವರು ನಟ ಹಾಗೂ ಲಾರೆನ್ಸ್‌ ಬಿಷ್ಣೋಯಿ ಗ್ಯಾಂಗ್‌ನ ಸದಸ್ಯರೆಂದು ಹೇಳಿಕೊಂಡಿರುವುದಾಗಿ ಪೊಲೀಸರು ವಿವರಿಸಿದ್ದಾರೆ.

ADVERTISEMENT

ಘಟನೆ ಸಂಬಂಧ ಯಾವುದೇ ಅಧಿಕೃತ ದೂರು ದಾಖಲಾಗಿಲ್ಲದಿದ್ದರೂ, ಇ–ಮೇಲ್ ನಿಜವಾದದ್ದೇ ಅಥವಾ ಯಾರಾದರೂ ಕಿಡಿಗೇಡಿತನ ಮಾಡಿದ್ದಾರೆಯೇ ಎಂದು ಅಪರಾಧ ವಿಭಾಗದ ತನಿಖಾಧಿಕಾರಿಗಳು ಪರಿಶೀಲಿಸುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಫೆ.1ರಂದು ಮುಂಬೈನ ಜುಹು ಪ್ರದೇಶದಲ್ಲಿರುವ ನಿರ್ದೇಶಕ ಹಾಗೂ ನಿರ್ಮಾಪಕ ರೋಹಿತ್ ಶೆಟ್ಟಿ ಅವರ ನಿವಾಸದ ಮೇಲೆ ಶೂಟರ್‌ಗಳು ಐದು ಸುತ್ತು ಗುಂಡು ಹಾರಿಸಿದ್ದರು. ಘಟನೆ ಸಂಬಂಧ ಆರೋಪಿಗಳ ವಿರುದ್ಧ ಮುಂಬೈ ಪೊಲೀಸರು, ಮಹಾರಾಷ್ಟ್ರ ಸಂಘಟಿತ ಅಪರಾಧ ಕೃತ್ಯಗಳ ನಿಯಂತ್ರಣ ಕಾಯ್ದೆ (ಎಂಸಿಒಸಿಎ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಬಿಷ್ಣೋಯಿ ಗ್ಯಾಂಗ್‌ನ ಸದಸ್ಯ ಶುಭಂ ಲೋಂಕರ್ ಸೂಚನೆ ಮೇರೆಗೆ ಆರೋಪಿಗಳು ಗುಂಡಿನ ದಾಳಿ ನಡೆಸಿದ್ದಾರೆ ಎಂಬುದು ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ. ಶುಭಂ ಈ ಪ್ರಕರಣ ಸೇರಿದಂತೆ ಎನ್‌ಸಿಪಿ ನಾಯಕ ಬಾಬಾ ಸಿದ್ದೀಕಿ ಹತ್ಯೆ ಮತ್ತು ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡು ಹಾರಿಸಿದ ಪ್ರಕರಣದಲ್ಲೂ ಬೇಕಾಗಿದ್ದ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.