ADVERTISEMENT

‘ವಾಮನ’ನಿಗೆ ಸಂಪತ್‌ ಟಕ್ಕರ್‌!

​ಪ್ರಜಾವಾಣಿ ವಾರ್ತೆ
Published 16 ಜೂನ್ 2022, 9:02 IST
Last Updated 16 ಜೂನ್ 2022, 9:02 IST
ಸಂಪತ್‌
ಸಂಪತ್‌   

‘ಬಜಾರ್‌’ ಸಿನಿಮಾ ಮೂಲಕ ನಾಯಕನಾಗಿ ಮಿಂಚಿದ್ದ ನಟ ಧ್ವನೀರ್,‌ ಇದೀಗ ‘ವಾಮನ’ ಎಂಬ ಹೊಸ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಶಂಕರ್ ರಾಮನ್ ನಿರ್ದೇಶನದ ಈ ಚಿತ್ರದಲ್ಲಿ ಖಳನಟನಾಗಿತೆಲುಗುಚಿತ್ರರಂಗದಖ್ಯಾತ ಬಹುಭಾಷಾ ನಟಸಂಪತ್‌ ನಟಿಸಲಿದ್ದು, ಅವರ ಪಾತ್ರದ ಫಸ್ಟ್‌ಲುಕ್‌ ಬಿಡುಗಡೆಯಾಗಿದೆ.

ಈಗಾಗಲೇ ಎರಡು ಹಂತದ ಶೂಟಿಂಗ್ ಮುಗಿಸಿರುವ ಚಿತ್ರತಂಡ ಈಗ ಮೂರನೇ ಹಂತದ ಚಿತ್ರೀಕರಣದಲ್ಲಿ ತಲ್ಲೀನವಾಗಿದೆ. ‘ಸಂಪತ್‌ ಅವರು, ಇಡೀ ಮಾಫಿಯಾವನ್ನು ತನ್ನ ತೆಕ್ಕೆಗೆ ತೆಗೆದುಕೊಂಡು ಅತ್ಯಂತ ಕ್ರೂರಿಯಾಗಿ ಬದುಕುವ ವಿಲನ್ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮೂರು ಶೇಡ್‌ಗಳಲ್ಲಿ ಅವರಿಲ್ಲಿ ಅಬ್ಬರಿಸಲಿದ್ದಾರೆ’ ಎನ್ನುತ್ತಾರೆ ಶಂಕರ್.

ಈಕ್ವಿನಾಕ್ಸ್ ಗ್ಲೋಬಲ್ ಎಂಟರ್‌ಟೈನ್‌ಮೆಂಟ್‌ನಡಿ ಮೂಡಿ ಬರುತ್ತಿರುವ ಈ ಮಾಸ್‌ ಆ್ಯಕ್ಷನ್‌ ಸಿನಿಮಾದಲ್ಲಿ ಧನ್ವೀರ್‌ಗೆ ಜೋಡಿಯಾಗಿ ರಚನಾ ರೈ ನಟಿಸುತ್ತಿದ್ದಾರೆ. ಮಹೇನ್ ಸಿಂಹ ಛಾಯಾಗ್ರಾಹಣ, ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಸುರೇಶ್ ಆರ್ಮುಗಂ ಸಂಕಲನ, ಅರ್ಜುನ್ ರಾಜ್, ಜಾಲಿ ಬಾಸ್ಟಿನ್ ಸಾಹಸ ನಿರ್ದೇಶನ ಚಿತ್ರಕ್ಕಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.