ADVERTISEMENT

ನಟ ಸತ್ಯಜಿತ್ ಆರೋಗ್ಯ ಸ್ಥಿತಿ ಗಂಭೀರ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2021, 8:29 IST
Last Updated 9 ಅಕ್ಟೋಬರ್ 2021, 8:29 IST
ಸತ್ಯಜಿತ್
ಸತ್ಯಜಿತ್   

ಬೆಂಗಳೂರು: ಚಂದನವನದ ಹಿರಿಯ ನಟ ಸತ್ಯಜಿತ್‌ ಅವರ ಆರೋಗ್ಯದಲ್ಲಿ ತೀವ್ರ ವ್ಯತ್ಯಯ ಉಂಟಾಗಿದ್ದು, ಅವರಿಗೆ ಆಂತರಿಕ ರಕ್ತಸ್ರಾವ ಉಂಟಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಸತ್ಯಜಿತ್‌ ಅವರಿಗೆ ಬೆಂಗಳೂರಿನ ಬೌರಿಂಗ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರಿಗೆ ಸಕ್ಕರೆ ಕಾಯಿಲೆ ಸಹಿತ ಇತರ ವಯೋಸಹಜ ಆರೋಗ್ಯ ಸಮಸ್ಯೆಗಳಿವೆ. ಈಗ ಅವರಿಗೆ ಜೀವರಕ್ಷಕದ ನೆರವು ನೀಡಲಾಗಿದೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ.

ಗ್ಯಾಂಗ್ರಿನ್‌ಗೆ ತುತ್ತಾಗಿದ್ದ ಅವರ ಒಂದು ಕಾಲನ್ನು ಕತ್ತರಿಸಲಾಗಿತ್ತು. ಸದ್ಯ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.