
ಉಗ್ರಂ ಮಂಜು, ಸಂಧ್ಯಾ
ಚಿತ್ರಕೃಪೆ: ಇನ್‌ಸ್ಟಾಗ್ರಾಂ
ಸ್ಯಾಂಡಲ್‌ವುಡ್ ನಟ, ಬಿಗ್‌ಬಾಸ್ ಮಾಜಿ ಸ್ಪರ್ಧಿ ಮಂಜು ಅವರು ಸಂಧ್ಯಾ ಖುಷಿ ಎಂಬುವವರ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ನಟ ಉಗ್ರಂ ಮಂಜು ಅವರು ತಮ್ಮ ನಿಶ್ಚಿತಾರ್ಥ ಫೋಟೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
ಇದೇ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಅಲ್ಲದೇ ಅಭಿಮಾನಿಗಳು ಈ ಜೋಡಿ ಶುಭ ಹಾರೈಸುತ್ತಿದ್ದಾರೆ.
ಉಗ್ರಂ ಮಂಜು ಎಂದೇ ಖ್ಯಾತಿ ಪಡೆದುಕೊಂಡಿರುವ ನಟ ಸುದೀಪ್ ಜತೆಗೆ ‘ಮ್ಯಾಕ್ಸ್’ನಲ್ಲಿ ನಟಿಸಿದ ಬಳಿಕ ಮ್ಯಾಕ್ಸ್ ಮಂಜು ಎಂದು ಸಾಮಾಜಿಕ ಜಾಲತಾಣದಲ್ಲಿ ಹೆಸರಿಟ್ಟುಕೊಂಡಿದ್ದರು.
ಸದ್ಯ ಸಂಧ್ಯಾ ಎಂಬುವವರ ಜೊತೆಗೆ ಉಗ್ರಂ ಮಂಜು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಸಂಧ್ಯಾ ಅವರು ವೈದ್ಯರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಹಾಗೂ ಅಂಗಾಂಗ ಕಸಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ.
ನಿಶ್ಚಿತಾರ್ಥ ಮಾಡಿಕೊಂಡ ಬಗ್ಗೆ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಹಂಚಿಕೊಂಡಿರುವ ಮಂಜು, ‘ಬದುಕಿನ ಹೊಸ ಅಧ್ಯಾಯ ಆರಂಭವಾಗಿದೆ. ನಿಮ್ಮ ಆಶೀರ್ವಾದ ನಮ್ಮ ಮೇಲಿರಲಿ. ದೇವರ ಕೃಪೆಯಿಂದ, ಕುಟುಂಬದ ಆಶೀರ್ವಾದದಿಂದ ನಾವು ಜೀವನದ ಹೊಸ ಹಾದಿಗೆ ಕಾಲಿಟ್ಟಿದ್ದೇವೆ. ಹೊಸ ಬಂಧದ ಆರಂಭ, ನಿಶ್ಚಿತಾರ್ಥದ ಸುಂದರ ಕ್ಷಣ ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳುತ್ತಿದ್ದೇವೆ’ ಎಂದು ಬರೆದುಕೊಂಡಿದ್ದಾರೆ.
ಇನ್ನು, ಉಗ್ರಂ ಮಂಜು ಅವರ ಭಾವಿ ಪತ್ನಿ ಸಂಧ್ಯಾ ಅವರು ಕೂಡ ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯರಾಗಿದ್ದಾರೆ.
ಸಂಧ್ಯಾ ಅವರು ಭಿನ್ನ ವಿಭಿನ್ನ ಲುಕ್‌ನಲ್ಲಿ ಫೋಟೊಗಳನ್ನು ಕ್ಲಿಕ್ಕಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.