ADVERTISEMENT

ನಟ ವಿಕ್ಕಿ ಕೌಶಲ್‌ಗೆ ಕೋವಿಡ್–19 ಸೋಂಕು

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2021, 7:54 IST
Last Updated 5 ಏಪ್ರಿಲ್ 2021, 7:54 IST
ವಿಕ್ಕಿ ಕೌಶಲ್‌
ವಿಕ್ಕಿ ಕೌಶಲ್‌   

ಮುಂಬೈ: ನಟ ವಿಕ್ಕಿ ಕೌಶಲ್ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಸದ್ಯ ಅವರು ಮನೆಯಲ್ಲೇ ಪ್ರತ್ಯೇಕವಾಸದಲ್ಲಿದ್ದಾರೆ.

ಸೋಂಕಿತರಾಗಿರುವ ಕುರಿತು ಅವರು ಇನ್‌ಸ್ಟಾಗ್ರಾಂನಲ್ಲಿ ಸಂದೇಶ ಪ್ರಕಟಿಸಿದ್ದಾರೆ.

‘ಎಲ್ಲ ರೀತಿಯ ಜಾಗರೂಕತೆ ಮತ್ತು ಮುನ್ನೆಚ್ಚರಿಕೆ ವಹಿಸಿದ ಹೊರತಾಗಿಯೂ ದುರದೃಷ್ಟವಶಾತ್ ನನಗೆ ಕೋವಿಡ್ ಸೋಂಕು ತಗುಲಿದೆ. ಮಾರ್ಗಸೂಚಿ ಅನುಸಾರ ಮನೆಯಲ್ಲೇ ಪ್ರತ್ಯೇಕ ವಾಸದಲ್ಲಿದ್ದೇನೆ. ವೈದ್ಯರ ಸಲಹೆ ಮೇರೆಗೆ ಔಷಧ ತೆಗೆದುಕೊಳ್ಳುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ತಕ್ಷಣವೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ಜಾಗರೂಕರಾಗಿರಿ ಮತ್ತು ಸುರಕ್ಷಿತರಾಗಿರಿ’ ಎಂದು ಅವರು ಉಲ್ಲೇಖಿಸಿದ್ದಾರೆ.

ADVERTISEMENT

ಬಾಲಿವುಡ್ ನಟಅಕ್ಷಯ್ ಕುಮಾರ್ ಅವರಿಗೂ ಕೋವಿಡ್ ಸೋಂಕು ತಗುಲಿರುವುದು ಭಾನುವಾರ ದೃಢಪಟ್ಟಿತ್ತು. ಅವರು ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ರಣಬೀರ್ ಕಪೂರ್, ಆಲಿಯಾ ಭಟ್, ಆದಿತ್ಯ ನಾರಾಯಣ್, ರೂಪಾಲಿ ಗಂಗೂಲಿ, ಕಾರ್ತಿಕ್ ಆರ್ಯನ್ ಹಾಗೂ ಅಮೀರ್ ಖಾನ್ ಅವರಿಗೂ ಇತ್ತೀಚೆಗೆ ಕೋವಿಡ್ ಸೋಂಕು ತಗುಲಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.