ADVERTISEMENT

‘ಮಾರ್ಕ್‌ ಆ್ಯಂಟನಿ‘ ಸಿನಿಮಾ ಚಿತ್ರೀಕರಣದ ವೇಳೆ ನಟ ವಿಶಾಲ್‌ಗೆ ಗಂಭೀರ ಗಾಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಆಗಸ್ಟ್ 2022, 5:11 IST
Last Updated 11 ಆಗಸ್ಟ್ 2022, 5:11 IST
ವಿಶಾಲ್‌
ವಿಶಾಲ್‌    

ಚೆನ್ನೈ: ತಮಿಳಿನ ‘ಮಾರ್ಕ್‌ ಆ್ಯಂಟನಿ‘ ಸಿನಿಮಾದ ಚಿತ್ರೀಕರಣ ವೇಳೆ ನಟ ವಿಶಾಲ್‌ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಚಿತ್ರತಂಡ ಹೇಳಿದೆ.

ವಿಶಾಲ್‌ ನಾಯಕ ನಟನಾಗಿ ಅಭಿನಯಿಸುತ್ತಿರುವ ‘ಮಾರ್ಕ್‌ ಆ್ಯಂಟನಿ‘ ಚಿತ್ರದ ಶೂಟಿಂಗ್‌ ವೇಳೆ ಈ ಅವಘಡ ಸಂಭವಿಸಿದೆ. ಫೈಟ್‌ವೊಂದರ ಚಿತ್ರೀಕರಣ ಸಮಯದಲ್ಲಿ ವಿಶಾಲ್‌ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ತಕ್ಷಣಕ್ಕೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ಮಾರ್ಕ್‌ ಆ್ಯಂಟನಿ ಚಿತ್ರತಂಡ ತಿಳಿಸಿದೆ ಎಂದು ತಮಿಳು ಮಾಧ್ಯಮಗಳು ವರದಿ ಮಾಡಿವೆ.

ಅದಿಕ್ ರವಿಚಂದ್ರನ್ ಮಾರ್ಕ್‌ ಆ್ಯಂಟನಿ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ನಟ ಹಾಗೂ ನಿರ್ದೇಶಕ ಸೂರ್ಯಾ ಕೂಡ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ADVERTISEMENT

ರಿತು ವರ್ಮ ನಾಯಕಿಯಾಗಿರುವ ಈ ಸಿನಿಮಾಗೆ ಜಿ. ವಿ ಪ್ರಕಾಶ್ ಕುಮಾರ್ ಸಂಗೀತ ನೀಡಿದ್ದಾರೆ. ಈ ಪ್ಯಾನ್ ಇಂಡಿಯಾ ಸಿನಿಮಾವನ್ನುವಿನೋದ್ ಕುಮಾರ್ ನಿರ್ಮಾಣ ಮಾಡುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.