
ಡಾ. ವಿಷ್ಣುವರ್ಧನ್
'ಸಾಹಸಸಿಂಹ' ವಿಷ್ಣುವರ್ಧನ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ವಿಷ್ಣುವರ್ಧನ್ ನಟನೆಯ 175ನೇ ಚಿತ್ರ ‘ಯಜಮಾನ’ ನವೆಂಬರ್ 7ರಂದು ರಾಜ್ಯಾದ್ಯಂತ ಮತ್ತೆ ಚಿತ್ರಮಂದಿರಗಳಲ್ಲಿ ಮರು ಬಿಡುಗಡೆಯಾಗುತ್ತಿದೆ.
ಯಜಮಾನ ಸಿನಿಮಾದ ಆಡಿಯೊ ಮತ್ತು ವಿಡಿಯೊ ಗುಣಮಟ್ಟವನ್ನು ತಂತ್ರಜ್ಞಾನದ ಸಹಾಯದಿಂದ ಮತ್ತಷ್ಟು ನವೀಕರಣ ಮಾಡಲಾಗಿದೆ. ಈ ಚಿತ್ರವನ್ನು ಸಿನಿಪ್ರಿಯರು ಸಂಭ್ರಮಿಸುವ ಸಲುವಾಗಿ ಚಿತ್ರತಂಡ ರೀ ರಿಲೀಸ್ ಮಾಡಲು ನಿರ್ಧರಿಸಿದೆ. ಈ ಮೂಲಕ ವಿಷ್ಣು ಅಭಿಮಾನಿಗಳ ಬಳಗಕ್ಕೆ ಸಿಹಿ ಸುದ್ದಿಯನ್ನು ಕೊಟ್ಟಂತಾಗಿದೆ. ಈಗಾಗಲೇ ಬುಕ್‌ಮೈ ಶೋನಲ್ಲಿ bookmyshow ಟಿಕೆಟ್ ಬುಕಿಂಗ್ ಆರಂಭವಾಗಿದ್ದು, ಇದೇ ತಿಂಗಳು 7, 8, 9ರಂದು ಬೆಂಗಳೂರಿನ ಚಿತ್ರಮಂದಿರದಲ್ಲಿ ಯಜಮಾನ ಸಿನಿಮಾವನ್ನು ವೀಕ್ಷಿಸಬಹುದು.
ಇನ್ನು, ಯಜಮಾನ ಸಿನಿಮಾದಲ್ಲಿ ವಿಷ್ಣುವರ್ಧನ್, ಶಶಿಕುಮಾರ್, ಅಭಿಜಿತ್, ಪ್ರೇಮಾ, ರಮೇಶ್ ಭಟ್, ಅವಿನಾಶ್, ಪವಿತ್ರ ಲೋಕೇಶ್, ಟೆನಿಸ್ ಕೃಷ್ಣ, ಎಂ.ಎನ್.ಲಕ್ಷ್ಮಿ ದೇವಿ, ಶೋಭರಾಜ್ ಸೇರಿದಂತೆ ಮುಂತಾದ ಕಲಾವಿದರು ನಟಿಸಿದ್ದಾರೆ. ಇತ್ತೀಚೆಗೆ ಕನ್ನಡ ಚಿತ್ರರಂಗದ ಖ್ಯಾತ ಕಲಾವಿದರಾದ ಸಾಹಸಸಿಂಹ ಖ್ಯಾತಿಯ ವಿಷ್ಣುವರ್ಧನ್ ಹಾಗೂ ಬಿ. ಸರೋಜಾದೇವಿ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡುವುದಾಗಿ ರಾಜ್ಯ ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.