ADVERTISEMENT

ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ ನಟ ಯಶ್‌–ರಾಧಿಕಾ‌ ದಂಪತಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ಮಾರ್ಚ್ 2025, 15:51 IST
Last Updated 18 ಮಾರ್ಚ್ 2025, 15:51 IST
   

ಬೆಂಗಳೂರು: ಅನಾರೋಗ್ಯದಿಂದಾಗಿ ಅಮೆರಿಕದಲ್ಲಿ ಚಿಕಿತ್ಸೆ ಪಡೆದು ಮರಳಿರುವ ನಟ, ಹ್ಯಾಟ್ರಿಕ್ ಹೀರೊ ಶಿವರಾಜ್‌ ಕುಮಾರ್ ಅವರನ್ನು ನಟ ಯಶ್ ಹಾಗೂ ರಾಧಿಕಾ‌ ಪಂಡಿತ್ ಅವರು ಮಂಗಳವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಶಿವರಾಜ್ ಕುಮಾರ್ ನಿವಾಸಕ್ಕೆ ಯಶ್‌–ರಾಧಿಕಾ ದಂಪತಿ ಭೇಟಿ ನೀಡಿದರು. ಶಿವಣ್ಣ ಹಾಗೂ ಗೀತಾ ಶಿವರಾಜ್‌ ಕುಮಾರ್‌ ಅವರೊಂದಿಗೆ ಮಾತುಕತೆ ನಡೆಸಿದರು.‌

ಕಳೆದ ಡಿ.24ರಂದು ಅಮೆರಿಕದ ಮಯಾಮಿ ಕ್ಯಾನ್ಸರ್‌ ಇನ್‌ಸ್ಟಿಟ್ಯೂಟ್‌ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿ, ಕ್ಯಾನ್ಸರ್‌ನಿಂದ ಸಂಪೂರ್ಣ ಗುಣಮುಖರಾಗಿರುವ ಶಿವರಾಜ್‌ಕುಮಾರ್‌ ಜನವರಿ 26ರಂದು ಬೆಂಗಳೂರಿಗೆ ಮರಳಿದ್ದರು. ನಾಗವಾರದಲ್ಲಿರುವ ಶಿವರಾಜ್‌ಕುಮಾರ್‌ ನಿವಾಸಕ್ಕೆ ಅಭಿಮಾನಿಗಳು, ಚಂದನವನದ ಕಲಾವಿದರು ಭೇಟಿ ನೀಡಿ ಶಿವರಾಜ್‌ಕುಮಾರ್‌ ಆರೋಗ್ಯ ವಿಚಾರಿಸುತ್ತಿದ್ದಾರೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.