ರಾಷ್ಟ್ರಪತಿ ದ್ರೌಪತಿ ಮುರ್ಮ ಅವರಿಂದ ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದ ನಟಿ ಅಲಿಯಾ ಭಟ್
ಚಿತ್ರ ಕೃಪೆ: ಇನ್‌ಸ್ಟಾಗ್ರಾಮ್
ನವದೆಹಲಿ: ರಾಷ್ಟ್ರ ಪ್ರಶಸ್ತಿ ಪಡೆಯಲು ಬಾಲಿವುಡ್ ನಟಿ ಅಲಿಯಾ ಭಟ್ ಅವರ ಮದುವೆ ಸೀರೆಯುಟ್ಟು, ಪತಿ ರಣಬೀರ್ ಕಪೂರ್ ಅವರೊಂದಿಗೆ ದೆಹಲಿಯ ವಿಜ್ಞಾನ ಭವನಕ್ಕೆ ಆಗಮಿಸಿದ್ದರು.
ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ‘ಗಂಗೂಭಾಯ್ ಕಥಿಯವಾಡಿ‘ ಚಿತ್ರದಲ್ಲಿನ ಅಭಿನಯಕ್ಕಾಗಿ ಆಲಿಯಾ ಭಟ್ ಅವರು ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.
ರಾಷ್ಟ್ರಪತಿ ದ್ರೌಪತಿ ಮುರ್ಮ ಅವರು ರಾಷ್ಟ್ರ ಪ್ರಶಸ್ತಿಯನ್ನು ಪ್ರದಾನ ಮಾಡಿದರು.
ಸವ್ಯಾಸಾಚಿ ಕ್ರಿಯೇಷನ್ಸ್ ವಿನ್ಯಾಸಗೊಳಿಸಿದ ಗೋಲ್ಡನ್ ಎಂಬ್ರಾಯ್ಡರಿ ಸೀರೆಯೊಂದಿಗೆ ಆಫ್-ವೈಟ್ನಲ್ಲಿ ಆಲಿಯಾ ಮಿಂಚಿದರು. ಇದೇ ವರ್ಷ ಏಪ್ರಿಲ್‌ನಲ್ಲಿ ಬಾಲಿವುಡ್ ನಟ ರಣಬೀರ್ ಕಪೂರ್ ಅವರೊಂದಿಗೆ ಹಸೆಮಣೆ ಏರಿದ್ದರು.
ಪತಿ ರಣಬೀರ್ ಕಪೂರ್ ಅವರೊಂದಿಗೆ ಅಲಿಯಾ
ಮಿಮಿ ಚಿತ್ರದಲ್ಲಿನ ಅಭಿನಯಕ್ಕಾಗಿ ಕೃತಿ ಸನೋನ್ ಅವರೊಂದಿಗೆ ಆಲಿಯಾ ಭಟ್ ಅತ್ಯುತ್ತಮ ನಟಿ ರಾಷ್ಟ್ರೀಯ ಪ್ರಶಸ್ತಿಯನ್ನು ಹಂಚಿಕೊಂಡರು
ಸಾಮಾನ್ಯವಾಗಿ ಸಾರ್ಜನಿಕವಾಗಿ ಕಾಣಿಸಿಕೊಳ್ಳುವ ಬಾಲಿವುಡ್ ನಟ– ನಟಿಯರು ಧರಿಸಿರುವ ಉಡುಗೆಗಳನ್ನು ಪುನಃ ಧರಿಸುವುದಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.