ADVERTISEMENT

20 ಕಿಡಿಗೇಡಿ YouTube ಚಾನಲ್‌ಗಳ ವಿರುದ್ಧ ಪೊಲೀಸರಿಗೆ ದೂರು ನೀಡಿದ ನಟಿ ಹನಿ ರೋಸ್

ಆರೋಪಿತ ಯೂಟ್ಯೂಬ್ ಚಾನಲ್‌ಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಹನಿ ರೋಸ್ ಎರ್ನಾಕುಲಂ ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ಜನವರಿ 2025, 6:07 IST
Last Updated 9 ಜನವರಿ 2025, 6:07 IST
<div class="paragraphs"><p>ಹನಿ ರೋಸ್</p></div>

ಹನಿ ರೋಸ್

   

ಬೆಂಗಳೂರು: ಮಲಯಾಳಂ ನಟಿ ಹನಿ ರೋಸ್‌ಗೆ ಚೆಮ್ಮನೂರು ಜ್ಯುವೆಲರ್ಸ್‌ನ ಬಾಬಿ ಚೆಮ್ಮನೂರ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಕುರಿತು ಬಾಬಿ ಅವರ ಬಂಧನವೂ ಆಗಿದೆ.

ಈಗ, ತಮ್ಮ ವಿರುದ್ಧ ಯೂಟ್ಯೂಬ್ ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಮಾನಹಾನಿ, ಲೈಂಗಿಕ ಕಿರುಕುಳ, ಅಶ್ಲೀಲ ಕಮೆಂಟ್ ಮಾಡುವವರಿಗೂ ಬಿಸಿ ಮುಟ್ಟಿಸಲು ಸಜ್ಜಾಗಿರುವ ಹನಿ ರೋಸ್ ಬರೋಬ್ಬರಿ 20 ಕಿಡಿಗೇಡಿ ಯೂಟ್ಯೂಬ್ ಚಾನಲ್‌ಗಳ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.

ADVERTISEMENT

ಆರೋಪಿತ ಯೂಟ್ಯೂಬ್ ಚಾನಲ್‌ಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಹನಿ ರೋಸ್ ಎರ್ನಾಕುಲಂ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ಮಾತೃಭೂಮಿ ಸುದ್ದಿಸಂಸ್ಥೆ ವರದಿ ಮಾಡಿದೆ.

ಈ 20 ಯೂಟ್ಯೂಬ್ ಚಾನಲ್‌ಗಳು ಹನಿ ರೋಸ್ ಬಗ್ಗೆ ಪ್ರಚೋದನಕಾರಿ ಹಾಗೂ ಮಾನಹಾನಿ ಮಾಡುವಂತೆ ಚಿತ್ರ, ವಿಡಿಯೊಗಳನ್ನು ತಿರುಚಿ ಹಾಕಿದ್ದಲ್ಲದೇ ತಪ್ಪು ಮಾಹಿತಿಯನ್ನು ಕೊಟ್ಟು ಜನಸಾಮಾನ್ಯರ ದಾರಿ ತಪ್ಪಿಸಿದ್ದಾರೆ ಎಂದು ರೋಸ್ ಆರೋಪಿಸಿದ್ದಾರೆ.

ಪೊಲೀಸರು ಈ ದೂರಿನ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಕೆಲ ದಿನಗಳ ಹಿಂದೆ ಫೇಸ್‌ಬುಕ್‌ ಪುಟದಲ್ಲಿಯೂ ಕೆಲವು ಕಿಡಿಗೇಡಿಗಳು ಅಶ್ಲೀಲ ಕಾಮೆಂಟ್‌ಗಳನ್ನು ಮಾಡುತ್ತಿದ್ದಾರೆ ಎಂದು ಹನಿ ರೋಸ್ ಆರೋಪಿಸಿ ದೂರು ದಾಖಲಿಸಿದ್ದರು.

ಪ್ರಕರಣ ಸಂಬಂಧ ಪಣಂಗಾಡು ಮೂಲದ 60 ವರ್ಷದ ಶಾಜಿ ಎಂಬುವರನ್ನು ಬಂಧಿಸಲಾಗಿತ್ತು. ಉಳಿದ ಎಲ್ಲಾ ಆರೋಪಿಗಳ ವಿರುದ್ಧ ಐಟಿ ಕಾಯ್ದೆಯ ಸೆಕ್ಷನ್ 75 ಮತ್ತು ಸೆಕ್ಷನ್ 67 ಸೇರಿದಂತೆ ಬಿಎನ್‌ಎಸ್‌ನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಇನ್ನೊಂದೆಡೆ ಎರ್ನಾಕುಲಂ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ಬಾಬಿ ಚೆಮ್ಮನೂರ್ ಅವರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.

30 ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿರುವ ನಟಿ, ಮಾಡೆಲ್ ಹನಿ ರೋಸ್, ಕನ್ನಡದ ‘ಅಜಂತಾ’ ಹಾಗೂ ‘ನಂಜನಗೂಡು ನಂಜುಂಡ’ ಎಂಬ ಸಿನಿಮಾಗಳಲ್ಲೂ ಅಭಿನಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.