ನಟ ಧನಂಜಯ ಅವರ ಡಾಲಿ ಪಿಕ್ಚರ್ಸ್ ನಿರ್ಮಾಣ ಮಾಡಿರುವ ‘ವಿದ್ಯಾಪತಿ’ ಸಿನಿಮಾ ಏ.10ಕ್ಕೆ ಬಿಡುಗಡೆಯಾಗಲಿದೆ. ಸಿನಿಮಾದಲ್ಲಿ ನಾಗಭೂಷಣ್‌ಗೆ ಜೋಡಿಯಾಗಿ ಮಲೈಕಾ ವಸುಪಾಲ್ ನಟಿಸುತ್ತಿದ್ದು, ಅವರು ಈ ಸಿನಿಮಾದಲ್ಲಿ ‘ಸೂಪರ್ ಸ್ಟಾರ್ ವಿದ್ಯಾ’ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಮಲೈಕಾ ಜನ್ಮದಿನದಂದು ‘ಸೂಪರ್ ಸ್ಟಾರ್ ವಿದ್ಯಾ’ಳ ಗ್ಲಿಮ್ಸ್ ಬಿಡುಗಡೆಯಾಗಿದ್ದು, ಸಿನಿಮಾದೊಳಗೆ ಸಿನಿಮಾ ನಾಯಕಿಯಾಗಿದ್ದಾರೆ. ಕಿರುತೆರೆಯಲ್ಲಿ ‘ಹಿಟ್ಲರ್ ಕಲ್ಯಾಣ’ ಧಾರಾವಾಹಿ ಮೂಲಕ ಮನೆಮಾತಾಗಿದ್ದ ಮಲೈಕಾ, ‘ಉಪಾಧ್ಯಕ್ಷ’ ಸಿನಿಮಾ ಮೂಲಕ ಚಂದನವನಕ್ಕೆ ಕಾಲಿಟ್ಟವರು. ಕರಾಟೆ ಕಿಂಗ್ ಆಗಿ ನಾಗಭೂಷನ್ ನಟಿಸುತ್ತಿದ್ದು, ನಾಗಭೂಷಣ್ ಎದುರು ಗರುಡ ರಾಮ್ ಖಳನಾಯಕನಾಗಿ ಅಬ್ಬರಿಸಲಿದ್ದಾರೆ. ಕರಾಟೆ ಮಾಸ್ಟರ್ ಅವತಾರದಲ್ಲಿ ರಂಗಾಯಣ ರಘು ನಟಿಸುತ್ತಿದ್ದಾರೆ. ಆ್ಯಕ್ಷನ್, ಕಾಮಿಡಿ ಕಥೆ ಹೊಂದಿರುವ ಈ ಚಿತ್ರವನ್ನು ಇಶಾಂ ಹಾಗೂ ಹಸೀಂ ಖಾನ್ ನಿರ್ದೇಶನ ಮಾಡುತ್ತಿದ್ದಾರೆ. ಲವಿತ್ ಛಾಯಾಚಿತ್ರಗ್ರಹಣ, ಮುರುಳಿ ನೃತ್ಯ ನಿರ್ದೇಶನ, ಅರ್ಜುನ್ ಮಾಸ್ಟರ್ ಸಾಹಸ ನಿರ್ದೇಶನ ಚಿತ್ರಕ್ಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.