ADVERTISEMENT

ನಟಿ ರಾಗಿಣಿ ಜೈಲಿನಿಂದ ಆಸ್ಪತ್ರೆಗೆ ಶಿಫ್ಟ್

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2020, 13:34 IST
Last Updated 24 ಡಿಸೆಂಬರ್ 2020, 13:34 IST
ರಾಗಿಣಿ ದ್ವಿವೇದಿ (ಪಿಟಿಐ ಚಿತ್ರ)
ರಾಗಿಣಿ ದ್ವಿವೇದಿ (ಪಿಟಿಐ ಚಿತ್ರ)   

ಡ್ರಗ್ಸ್ ಪೆಡ್ಲರ್‌ಗಳ ಜೊತೆ ಸಂಪರ್ಕ ಹೊಂದಿದ್ದರು ಎಂಬ ಕಾರಣಕ್ಕೆ ಬಂಧನಕ್ಕೆ ಒಳಗಾಗಿದ್ದ ನಟಿ ರಾಗಿಣಿ ದ್ವಿವೇದಿ ತೀವ್ರ ಬೆನ್ನುನೋವಿನ ಕಾರಣದಿಂದ ಸಂಜಯ್‌ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ತುಪ್ಪದ ಬೆಡಗಿಯೊಂದಿಗೆ ನಟಿ ಸಂಜನಾ ಕೂಡ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೊಳಗಾಗಿದ್ದರು. ಸಂಜನಾ ಆರೋಗ್ಯದ ಸಮಸ್ಯೆಯ ಕಾರಣದಿಂದ ಇತ್ತೀಚೆಗೆ ಬೇಲ್ ಪಡೆದಿದ್ದರು. ರಾಗಿಣಿ ಕೂಡ ಬೇಲ್‌ಗೆ ಅರ್ಜಿ ಸಲ್ಲಿಸಿದ್ದು ಕೋರ್ಟ್ ಅವರ ಅರ್ಜಿಯನ್ನು ತಿರಸ್ಕರಿಸಿತ್ತು.

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ರಾಗಿಣಿ ಕಳೆದ ಕೆಲವು ದಿನಗಳಿಂದ ಜೈಲಿನ ಆಸ್ಪತ್ರೆ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಬುಧವಾರ ತೀವ್ರ ನೋವಿನಿಂದ ಬಳಲುತ್ತಿದ್ದ ಕಾರಣ ಅಧಿಕಾರಿಗಳು ಹೆಚ್ಚಿನ ಚಿಕಿತ್ಸೆಗಾಗಿ ಸಂಜಯ್‌ ಗಾಂಧಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.