ADVERTISEMENT

ನಟಿ ರಾಖಿ ಸಾವಂತ್‌ ಪೊಲೀಸರ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 19 ಜನವರಿ 2023, 10:27 IST
Last Updated 19 ಜನವರಿ 2023, 10:27 IST
 ರಾಖಿ ಸಾವಂತ್‌
ರಾಖಿ ಸಾವಂತ್‌   

ಮುಂಬೈ: ಬಾಲಿವುಡ್‌ ನಟಿ ರಾಖಿ ಸಾವಂತ್‌ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ.

ನಟಿ ಶೆರ್ಲಿನ್ ಚೋಪ್ರಾ ನೀಡಿದ್ದ ದೂರಿನ ಅನ್ವಯ ರಾಖಿ ಸಾವಂತ್‌ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಇಲ್ಲಿನ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಶೆರ್ಲಿನ್ ಚೋಪ್ರಾ ಕೂಡ ಟ್ವೀಟ್‌ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ರಾಖಿ ಸಾವಂತ್ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ನಿನ್ನೆ ವಜಾ ಮಾಡಿದೆ. ಪೊಲೀಸರು ರಾಖಿಯನ್ನು ಬಂಧಿಸಿದ್ದಾರೆ ಎಂದು ಶೆರ್ಲಿನ್ ಚೋಪ್ರಾ ಟ್ವೀಟ್ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.