ತೆಲುಗು ಹಾಗೂ ಹಿಂದಿ ಚಿತ್ರರಂಗದಲ್ಲಿ ಬೇಡಿಕೆ ನಟಿಯಾಗಿ ಬೆಳೆದಿರುವ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿಅಪಾರ ಅಭಿಮಾನಿಗಳನ್ನು ಹೊಂದಿರುವ ರಾಕುಲ್ ಪ್ರೀತ್ ಸಿಂಗ್ ವಿವಾಹದ ಸನಿಹದಲ್ಲಿದ್ದಾರೆ.
ನಟ ಹಾಗೂ ನಿರ್ಮಾಪಕ ಜಕ್ಕಿ ಬಗ್‌ನಾನಿ ಅವರೇ ರಾಕುಲ್ ಅವರ ಹುಡುಗ. ಅವರು ಇದೇ 21 ರಂದು ಗೋವಾದಲ್ಲಿ ಮದುವೆಯಾಗಲಿದ್ದಾರೆ ಎನ್ನಲಾಗಿದೆ
ಕೋಲ್ಕತ್ತ ಮೂಲದ 36 ವರ್ಷದ ಜಕ್ಕಿ ಬಗ್‌ನಾನಿ ಬಾಲಿವುಡ್ ನಟ ಹಾಗೂ ನಿರ್ಮಾಪಕ.
‘ಫಾಲ್ತು’, ‘ಅಜಬ್ ಗಜಬ್’, ‘ಮೋಹಿನಿ’, ‘ವೆಲ್ ಕಮ್ ಟು ಕರಾಚಿ’, ‘ರಂಗ್ರೇಜ್’ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದು, ‘ಕೂಲಿ ನಂ 1’, ‘ವೆಲ್ ಕಮ್ ಟು ನ್ಯೂಯಾರ್ಕ್’, ‘ಬೆಲ್ ಬಾಟಮ್’ ಸೇರಿ ಹಲವುಸಿನಿಮಾಗಳನ್ನು ನಿರ್ಮಿಸಿದ್ದಾರೆ.
ತೆರೆಮರೆಯಲ್ಲಿ ರಾಕುಲ್ ಹಾಗೂ ಜಕ್ಕಿ ಕುಟುಂಬದವರು ಮದುವೆ ತಯಾರಿ ನಡೆಸಿದ್ದು ಇನ್ನೂ ಅಧಿಕೃತವಾಗಿ ತಿಳಿಸಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.