ನಟಿ ತ್ರಿಷಾ
ಪುನೀತ್ ರಾಜ್‌ಕುಮಾರ್ ನಟನೆಯ ‘ಪವರ್’ ಚಿತ್ರದ ಮೂಲಕ ಗಮನ ಸೆಳೆದಿದ್ದ ನಟಿ ತ್ರಿಷಾ ಅವರು ತಿರುಪತಿ ಸನ್ನಿಧಿಗೆ ಭೇಟಿ ನೀಡಿದ್ದಾರೆ.
ತ್ರಿಷಾ ಅವರು ತಿರುಪತಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ದೇವರ ಆರ್ಶೀವಾದ ಪಡೆದುಕೊಂಡಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಫೋಸ್ಟ್ ಹಂಚಿಕೊಂಡಿದ್ದಾರೆ.
ನಟಿ ತ್ರಿಷಾ
ಕೆಲವು ದಿನಗಳ ಹಿಂದೆ ತಮಿಳುನಾಡು ಬಿಜೆಪಿ ನಾಯಕ ನೈನಾರ್ ನಾಗೇಂದ್ರನ್ ಅವರು ‘ನಟ ವಿಜಯ್ ಅವರು ತ್ರಿಷಾ ಅವರ ಗುಂಗಿನಿಂದ ಹೊರಬರಬೇಕು’ ಎಂಬ ಹೇಳಿಕೆಯು ಬಾರಿ ವಿವಾದಕ್ಕೆ ಕಾರಣವಾಗಿತ್ತು.
ಬಿಜೆಪಿ ನಾಯಕನ ಹೇಳಿಕಗೆ ನಟಿ ತ್ರಿಷಾ ಅವರು, ‘ರಾಜಕೀಯದಲ್ಲಿ ಉನ್ನತ ಸ್ಥಾನದಲ್ಲಿ ಇದ್ದವರು ಈ ರೀತಿಯ ಅಸಹ್ಯ ಮತ್ತು ಅನುಚಿತ ಮಾತುಗಳನ್ನು ಆಡಬಾರದು’ ಎಂದು ಸಾಮಾಜಿಕ ಮಾಧ್ಯಮದಲ್ಲಿ ಕಿಡಿಕಾರಿದ್ದರು.
ಬಹುಭಾಷಾ ನಟಿ ನಟಿ ತ್ರಿಷಾ ಅವರು, ‘ರಾಂಗಿ‘, ‘ದಿ ರೋಡ್’,‘ಲಿಯೋ‘, ಸೇರಿ ಅನೇಕ ಚಿತ್ರಗಳಲ್ಲಿ ನಟಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.