ADVERTISEMENT

ಮೇ 10ಕ್ಕೆ ‘ಅಧಿಪತ್ರ’ ಟೀಸರ್‌

​ಪ್ರಜಾವಾಣಿ ವಾರ್ತೆ
Published 6 ಮೇ 2024, 23:41 IST
Last Updated 6 ಮೇ 2024, 23:41 IST
ರೂಪೇಶ್‌ ಶೆಟ್ಟಿ 
ರೂಪೇಶ್‌ ಶೆಟ್ಟಿ    

ಬಿಗ್‌ಬಾಸ್ ಖ್ಯಾತಿಯ ರೂಪೇಶ್ ಶೆಟ್ಟಿ ನಟಿಸಿರುವ ‘ಅಧಿಪತ್ರ’ ಸಿನಿಮಾದ ಆಡಿಯೊ ಹಕ್ಕುಗಳನ್ನು ಲಹರಿ ಖರೀದಿ ಮಾಡಿದೆ. ಇದೇ ವರ್ಷ ಸಿನಿಮಾ ಬಿಡುಗಡೆಗೊಳ್ಳಲಿದ್ದು, ಚಿತ್ರದ ಟೀಸರ್‌ ಮೇ 10ಕ್ಕೆ ಬಿಡುಗಡೆಯಾಗಲಿದೆ. 

ಸದ್ಯ ಚಿತ್ರದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸ ಭರದಿಂದ ಸಾಗಿದೆ. ಚಿತ್ರಕ್ಕೆ ಚಯನ್ ಶೆಟ್ಟಿ ಆ್ಯಕ್ಷನ್‌ ಕಟ್‌ ಹೇಳಿದ್ದು, ಇದು ಇವರ ಚೊಚ್ಚಲ ಸಿನಿಮಾ. ರೂಪೇಶ್‌ಗೆ ಜೋಡಿಯಾಗಿ ಗಿಚ್ಚಿ ಗಿಲಿಗಿಲಿ ಖ್ಯಾತಿಯ ಜಾಹ್ನವಿ ನಟಿಸಿದ್ದಾರೆ. ಪ್ರಕಾಶ್ ತುಮಿನಾಡು, ರಘು ಪಾಂಡೇಶ್ವರ್, ಎಂಕೆ‌ ಮಠ, ದೀಪಕ್ ರೈ, ಅನಿಲ್ ಉಪ್ಪಾಲ್, ಕಾರ್ತಿಕ್ ಭಟ್, ಪ್ರಶಾಂತ್ ತಾರಾಬಳಗದಲ್ಲಿದ್ದಾರೆ.

ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯಲ್ಲಿನ ‘ಅಧಿಪತ್ರ’ ಸಿನಿಮಾವನ್ನು ಕೆ.ಆರ್. ಸಿನಿಕಂಬೈನ್ಸ್ ಬ್ಯಾನರ್‌ನಡಿ‌ ದಿವ್ಯಾ ನಾರಾಯಣ್, ಕುಲದೀಪ್ ರಾಘವ್, ಲಕ್ಷ್ಮೇಗೌಡ ‌ಬಂಡವಾಳ ಹೂಡಿ ನಿರ್ಮಾಣ ಮಾಡಿದ್ದಾರೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.