ADVERTISEMENT

ವ್ಯಕ್ತಿತ್ವದ ಹಕ್ಕು ರಕ್ಷಣೆ ಕೋರಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಐಶ್ವರ್ಯಾ ರೈ

ಪಿಟಿಐ
Published 9 ಸೆಪ್ಟೆಂಬರ್ 2025, 7:35 IST
Last Updated 9 ಸೆಪ್ಟೆಂಬರ್ 2025, 7:35 IST
ಐಶ್ವರ್ಯಾ ರೈ
ಐಶ್ವರ್ಯಾ ರೈ   

ನವದೆಹಲಿ: ತಮ್ಮ ಪ್ರಚಾರ, ವ್ಯಕ್ತಿತ್ವದ ಹಕ್ಕುಗಳನ್ನು ರಕ್ಷಿಸುವಂತೆ ಕೋರಿ ಬಾಲಿವುಡ್ ನಟಿ ಐಶ್ವರ್ಯಾ ರೈ, ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಕೆಲವು ವ್ಯಕ್ತಿಗಳು ತಮ್ಮ ಹೆಸರು, ಚಿತ್ರಗಳು ಮತ್ತು ಅನಧಿಕೃತವಾಗಿ ಕೃತಕ ಬುದ್ಧಿಮತ್ತೆಯಿಂದ ಸೃಷ್ಟಿಸಿದ ಅಶ್ಲೀಲ ಕಂಟೆಂಟ್‌ಗಳನ್ನು ಬಳಸದಂತೆ ತಡೆ ನೀಡುವಂತೆ ಕೋರಿದ್ದಾರೆ.

ನ್ಯಾಯಮೂರ್ತಿ ತೇಜಸ್ ಕರಿಯಾ ಅವರು, ಈ ಸಂಬಂಧ ಎಚ್ಚರಿಕೆ ನೀಡುವ ಮಧ್ಯಂತರ ಆದೇಶವನ್ನು ಹೊರಡಿಸುವುದಾಗಿ ಮೌಖಿಕವಾಗಿ ಸುಳಿವು ನೀಡಿದ್ದಾರೆ.

ADVERTISEMENT

ರೈ ಪರವಾಗಿ ಹಾಜರಾದ ಹಿರಿಯ ವಕೀಲ ಸಂದೀಪ್ ಸೇಥಿ, ನಟಿ ತಮ್ಮ ಪ್ರಚಾರ ಮತ್ತು ವ್ಯಕ್ತಿತ್ವ ಹಕ್ಕುಗಳ ರಕ್ಷಣೆಗೆ ಪ್ರಯತ್ನಿಸುತ್ತಿದ್ದಾರೆ. ಕೆಲವು ಸಂಪೂರ್ಣವಾಗಿ ಅವಾಸ್ತವಿಕ ಅಶ್ಲೀಲ ಚಿತ್ರಗಳನ್ನು ಇಂಟರ್ನೆಟ್‌ನಲ್ಲಿ ಪ್ರಸಾರ ಮಾಡಲಾಗುತ್ತಿದೆ ಎಂದು ವಾದಿಸಿದ್ದಾರೆ.

ರೈ ಅವರ ಚಿತ್ರಗಳು, ವ್ಯಕ್ತಿತ್ವವನ್ನು ಬಳಸಿಕೊಳ್ಳಲು ಯಾರಿಗೂ ಯಾವುದೇ ಹಕ್ಕಿಲ್ಲ. ಚಿತ್ರವನ್ನು ಮಾರ್ಫ್ ಮಾಡಿ ಅವರ ಮುಖ ಮತ್ತು ಹೆಸರನ್ನು ಬಳಸಿ ಲಾಭ ಮಾಡಿಕೊಳ್ಳಲಾಗುತ್ತಿದೆ ಎಂದೂ ವಾದಿಸಿದ್ದಾರೆ.

‘ಅವರ ಹೆಸರು ಮತ್ತು ಹೋಲಿಕೆಯನ್ನು ಬಳಸಿ ಯಾರದ್ದೋ ಲೈಂಗಿಕ ಆಸೆಗಳನ್ನು ಪೂರೈಸಲಾಗುತ್ತಿದೆ. ಇದು ದುರದೃಷ್ಟಕರ’ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.