ADVERTISEMENT

ಪಾಲಕರ ವಿವಾಹ ವಾರ್ಷಿಕೋತ್ಸವ: ಅಪ್ಪ–ಅಮ್ಮನ ಹಳೆ ಫೋಟೊ ಹಂಚಿಕೊಂಡ ಐಶ್ವರ್ಯಾ ರೈ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 23 ಡಿಸೆಂಬರ್ 2023, 3:01 IST
Last Updated 23 ಡಿಸೆಂಬರ್ 2023, 3:01 IST
<div class="paragraphs"><p>ಐಶ್ವರ್ಯಾ ರೈ ಅವರ ತಂದೆ ಕೃಷ್ಣರಾಜ್ ರೈ ಮತ್ತು ತಾಯಿ ವೃಂದಾ&nbsp;</p></div>

ಐಶ್ವರ್ಯಾ ರೈ ಅವರ ತಂದೆ ಕೃಷ್ಣರಾಜ್ ರೈ ಮತ್ತು ತಾಯಿ ವೃಂದಾ 

   

INSTA/aishwaryaraibachchan_arb

ಬಾಲಿವುಡ್ ನಟಿ ಐಶ್ವರ್ಯಾ ರೈ ಅವರು ತಂದೆ ಕೃಷ್ಣರಾಜ್‌ ರೈ ಮತ್ತು ತಾಯಿ ವೃಂದಾ ಅವರ ಹಳೆ ಫೋಟೊವೊಂದನ್ನು ಹಂಚಿಕೊಂಡಿದ್ದು, ವಿವಾಹ ವಾರ್ಷಿಕೋತ್ಸವದ ಶುಭಾಶಯ ತಿಳಿಸಿದ್ದಾರೆ. ‘ನಿಮ್ಮನ್ನು ತುಂಬಾ ಪ್ರೀತಿಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

ADVERTISEMENT

ಮದುವೆಯಾದ ಹೊಸತರಲ್ಲಿ ತೆಗೆದ ತಂದೆ–ತಾಯಿಯ ಫೋಟೊವನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ಐಶ್ವರ್ಯಾ, ‘ಪ್ರೀತಿಯ ಅಪ್ಪ–ಅಮ್ಮ ನಾನು ನಿಮ್ಮನ್ನು ತುಂಬಾ ಪ್ರೀತಿಸುತ್ತೇನೆ. ಮದುವೆಯ ವಾರ್ಷಿಕೋತ್ಸವದ ಈ ಸಂದರ್ಭದಲ್ಲಿ ನಿಮಗೆ ಶುಭಾಶಯ ತಿಳಿಸುತ್ತೇನೆ. ನಿಮಗಾಗಿ ಸದಾ ಪ್ರಾರ್ಥಿಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

ಫೋಟೊ ನೋಡಿದ ಐಶ್ವರ್ಯಾ ಅಭಿಮಾನಿಗಳು ಸಂತಸ ಹಂಚಿಕೊಂಡಿದ್ದು, ‘ನೀವು ನಿಮ್ಮ ತಾಯಿ ಹಾಗೆ ಕಾಣಿಸುತ್ತಿದ್ದೀರಿ’ ಎಂದು ಹೇಳಿದ್ದಾರೆ.

ದೀರ್ಘಕಾಲದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ತಂದೆ ಕೃಷ್ಣರಾಜ್‌ ಅವರು 2017ರಲ್ಲಿ ಮೃತಪಟ್ಟಿದ್ದರು. ತಂದೆ ಅಗಲಿಕೆ ತುಂಬಾ ನೋವು ತಂದಿದೆ ಎಂದು ಐಶ್ವರ್ಯ ಹೇಳಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.