ಹೈದರಾಬಾದ್: ನಟ ಧನುಷ್ ಅವರಿಂದ ವಿಚ್ಛೇದನ ಪಡೆದ ಬಳಿಕ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಐಶ್ವರ್ಯಾ ರಜನಿಕಾಂತ್, ಫಿಟ್ನೆಸ್‌ಗೆ ಹೆಚ್ಚು ಒತ್ತು ನೀಡುತ್ತಿದ್ದಾರೆ.
ಐಶ್ವರ್ಯಾ ವರ್ಕೌಟ್ ಮಾಡುತ್ತಿರುವ ವಿಡಿಯೊವನ್ನು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದನ್ನು ನೋಡಿರುವ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
‘ಆರೋಗ್ಯವು ನಿಜವಾಗಿಯೂ ನಿಮ್ಮ ದೊಡ್ಡ ಸಂಪತ್ತು. ಗುಣಮಟ್ಟದ ಆಹಾರ, ಶುದ್ಧ ನೀರು, ದ್ರವ ಪದಾರ್ಥಗಳನ್ನು ಸೇವಿಸಿ ಆರೋಗ್ಯವಂತರಾಗಿರಿ’ ಎಂದು ಬರೆದುಕೊಂಡಿದ್ದಾರೆ.
ತಮಿಳಿನಲ್ಲಿ ‘3‘ ಮತ್ತು ‘ವೈ ರಾಜಾ ವೈ‘ ಚಿತ್ರಗಳನ್ನು ನಿರ್ದೇಶಿಸಿ ಹೆಸರು ಗಳಿಸಿರುವ ಐಶ್ವರ್ಯಾ ರಜನಿಕಾಂತ್, ಬಾಲಿವುಡ್‌ನಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಸದ್ಯ ಅವರು ‘ಒಹ್ ಸಾಥಿ ಚಲ್‘ ಹೆಸರಿನ ಹಿಂದಿ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.
ಜನವರಿಯಲ್ಲಿ ನಟ ಧನುಷ್ ಹಾಗೂ ಐಶ್ವರ್ಯಾ ದಂಪತಿ ವಿಚ್ಛೇದನ ಪಡೆದಿದ್ದೇವೆ ಎಂದುಘೋಷಿಸಿದ್ದರು.
ಐಶ್ವರ್ಯಾ ಅವರನ್ನು ಧನುಷ್ ಅವರು 2004ರಲ್ಲಿ ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.