ಬಾಲಿವುಡ್ ನಟ ಅಜಯ್ ದೇವಗನ್ ನಿರ್ದೇಶನದ ’ರನ್ವೇ 34’ ಸಿನಿಮಾ ಏಪ್ರಿಲ್ 29ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.
ಈ ಬಗ್ಗೆ ಚಿತ್ರತಂಡ ಅಧಿಕೃತವಾಗಿ ಪ್ರಕಟಿಸಿದೆ. ಬಿಗ್ಬಿ ಅಮಿತಾಭ್ ಬಚ್ಚನ್, ರಾಕುಲ್ ಪ್ರೀತ್ ಸಿಂಗ್ ಕೂಡ ನಟಿಸಿದ್ದಾರೆ.
ನೈಜ ಘಟನೆಗಳ ಆಧಾರದ ಮೇಲೆ ಚಿತ್ರೀಕರಿಸಲಾಗಿರುವ ಈ ಸಿನಿಮಾ ಏಪ್ರಿಲ್ 29ರ’ಈದ್’ ದಿನ ಬಿಡುಗಡೆಯಾಗಲಿದೆ.
ಚಿತ್ರ ಬಿಡುಗಡೆ ಬಗ್ಗೆನಟ ಸಲ್ಮಾನ್ ಖಾನ್ ಕೂಡ ಟ್ವೀಟ್ ಮಾಡಿದ್ದಾರೆ. ಚಿತ್ರದ ಟೀಸರ್ ಬಿಡುಗಡೆಯಾಗಿ ಕೆಲವೇ ಗಂಟೆಗಳಲ್ಲಿ ಸಾವಿರಾರು ವೀಕ್ಷಣೆ ಪಡೆದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.