ಅಜಾಜ್ ಖಾನ್
Credit: X/@priyankac19
ಮುಂಬೈ: ಚಿತ್ರರಂಗದಲ್ಲಿ ಅವಕಾಶ ಕೊಡಿಸುವ ನೆಪದಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂಬ ಆರೋಪದಡಿ ನಟ ಅಜಾಜ್ ಖಾನ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಿನಿಮಾಗಳಲ್ಲಿ ಅವಕಾಶ ಕೊಡಿಸುವುದಾಗಿ ಭರವಸೆ ನೀಡಿ, ಅನೇಕ ಭಾರಿ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು 30 ವರ್ಷದ ಮಹಿಳೆಯೊಬ್ಬರು ಇತ್ತೀಚೆಗೆ ಚಾರ್ಕೋಪ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಹಿಂದೆ, ವೆಬ್ ಸರಣಿ 'ಹೌಸ್ ಅರೆಸ್ಟ್'ನಲ್ಲಿ ಅಶ್ಲೀಲ ವಿಚಾರಗಳನ್ನು ಉಲ್ಲೇಖಿಸಿದ್ದಕ್ಕಾಗಿ ಖಾನ್ ಸೇರಿದಂತೆ ಅನೇಕರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ.
ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಖಾನ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.