ADVERTISEMENT

‘ಅಖಂಡ–2’ ಡಿ.5ಕ್ಕೆ ತೆರೆಗೆ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2025, 21:36 IST
Last Updated 3 ಅಕ್ಟೋಬರ್ 2025, 21:36 IST
ಬಾಲಯ್ಯ 
ಬಾಲಯ್ಯ    

ಈ ವರ್ಷದ ಡಿಸೆಂಬರ್‌ನಲ್ಲಿ ತೆರೆಗಳಲ್ಲಿ ಸಿನಿಹಬ್ಬವಿರಲಿದೆ. ಕನ್ನಡದಲ್ಲಿ ಶಿವರಾಜ್‌ಕುಮಾರ್‌, ಉಪೇಂದ್ರ ಹಾಗೂ ರಾಜ್‌ ಬಿ.ಶೆಟ್ಟಿ ನಟನೆಯ ‘45’, ದರ್ಶನ್‌ ನಟನೆಯ ‘ಡೆವಿಲ್‌’ ಹಾಗೂ ಸುದೀಪ್‌ ನಟನೆಯ ‘ಮಾರ್ಕ್‌’ ಸಿನಿಮಾಗಳು ತೆರೆಕಾಣುತ್ತಿದ್ದು, ತೆಲುಗಿನಲ್ಲಿ ಅಖಂಡ–2 ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಈ ಸಿನಿಮಾವೂ ಡಿಸೆಂಬರ್‌ 5ರಂದು ತೆರೆಕಾಣುತ್ತಿದೆ.  

ನಟ ನಂದಮೂರಿ ಬಾಲಕೃಷ್ಣ ಅಭಿನಯದ ಈ ಸಿನಿಮಾ 2021ರಲ್ಲಿ ತೆರೆಕಂಡ ಅಖಂಡ ಸಿನಿಮಾದ ಸೀಕ್ವೆಲ್‌. ಇದು ಪ್ಯಾನ್ ಇಂಡಿಯಾ ಸಿನಿಮಾವಾಗಿ ತೆರೆಕಾಣಲಿದೆ. ಬೊಯಪಾಟಿ ಶ್ರೀನು ಹಾಗೂ ಬಾಲಕೃಷ್ಣ ಕಾಂಬಿನೇಷನ್‌ನ ನಾಲ್ಕನೇ ಸಿನಿಮಾ ಇದಾಗಿದೆ. ಈ ಹಿಂದೆ ಬಂದಿದ್ದ ‘ಸಿಂಹ’, ‘ಲೆಜೆಂಡ್’ ಹಾಗೂ ‘ಅಖಂಡ’ ಸಿನಿಮಾಗಳು ಹಿಟ್‌ ಲಿಸ್ಟ್‌ ಸೇರ್ಪಡೆಯಾಗಿದ್ದವು. 14 ರೀಲ್ಸ್ ಪ್ಲಸ್ ಬ್ಯಾನರ್ ಅಡಿಯಲ್ಲಿ ರಾಮ್ ಅಚಂತ ಮತ್ತು ಗೋಪಿಚಂದ್ ಅಚಂತ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. 

‘ಅಖಂಡ-2’ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸ ಭರದಿಂದ ಸಾಗಿದ್ದು, ಚಿತ್ರದಲ್ಲಿ ಬಾಲಯ್ಯಗೆ ಜೋಡಿಯಾಗಿ ಸಂಯುಕ್ತಾ ನಟಿಸಿದ್ದಾರೆ. ಆದಿ ಪಿನಿಸೆಟ್ಟಿ ಖಳನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಸಿನಿಮಾಗೆ ಎಸ್. ತಮನ್ ಸಂಗೀತ ನಿರ್ದೇಶನ, ಸಿ.ರಾಮಪ್ರಸಾದ್, ಸಂತೋಷ್ ಡಿ.ಡೆಟಕೆ ಛಾಯಾಚಿತ್ರಗ್ರಹಣ, ಎ.ಎಸ್ ಪ್ರಕಾಶ್ ಕಲಾ ನಿರ್ದೇಶನ, ತಮ್ಮಿರಾಜು ಸಂಕಲನ, ರಾಮ್-ಲಕ್ಷ್ಮಣ್‌ ಸಾಹಸ ನಿರ್ದೇಶನವಿದೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.