
ನಂದಮೂರಿ ಬಾಲಕೃಷ್ಣ, ನಟ ಶಿವರಾಜ್‌ಕುಮಾರ್
ನಟ ನಂದಮೂರಿ ಬಾಲಕೃಷ್ಣ ಅಭಿನಯದ ಅಖಂಡ 2 ಸಿನಿಮಾದ ಟ್ರೇಲರ್ ಇಂದು (ಶುಕ್ರವಾರ) ಸಂಜೆ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ. ಈ ಸಿನಿಮಾದ ಟ್ರೇಲರ್ ಅನ್ನು ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಅವರು ಬಿಡುಗಡೆ ಮಾಡುತ್ತಿರುವುದು ವಿಶೇಷ.
ಈ ಕುರಿತು 14 ರೀಲ್ಸ್ ಪ್ಲಸ್ ತನ್ನ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದೆ. ‘ದೈವಿಕ ಸಾಮೂಹಿಕ ಶಕ್ತಿ ಇಂದು ಮೇಲೇರುತ್ತದೆ. ನವೆಂಬರ್ 21ರಂದು ಸಂಜೆ 6 ಗಂಟೆಗೆ ಚಿಕ್ಕಬಳ್ಳಾಪುರದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅವರು ವೇದಿಕೆ ಹಂಚಿಕೊಳ್ಳಲಿದ್ದಾರೆ. ಅವರೊಂದಿಗೆ ಸಂಜೆ 5 ಗಂಟೆಗೆ ಕಾರ್ಯಕ್ರಮ ಪ್ರಾರಂಭವಾಗುತ್ತದೆ. ಜೊತೆಗೆ ಅಖಂಡ 2 ಟ್ರೇಲರ್ ಇಂದು ಸಂಜೆ 7:56ಕ್ಕೆ ಬಿಡುಗಡೆಯಾಗಲಿದೆ ಎಂದು ಬರೆದುಕೊಂಡಿದೆ.
ಇತ್ತೀಚೆಗೆ ಚಿತ್ರತಂಡ ಅಖಂಡ 2 ಸಿನಿಮಾದ ಹಾಡೊಂದನ್ನು ಬಿಡುಗಡೆ ಮಾಡಿತ್ತು. ಬಿಡುಗಡೆಯಾದ ‘ತಾಂಡವಮ್’ ಹಾಡು ಯೂಟ್ಯೂಬ್‌ನಲ್ಲಿ ಸದ್ದು ಮಾಡುತ್ತಿದೆ. ಇನ್ನು, ಅಖಂಡ 2 ಸಿನಿಮಾವು ಡಿಸೆಂಬರ್ 5ಕ್ಕೆ ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ. 14 ರೀಲ್ಸ್ ಪ್ಲಸ್ ಬ್ಯಾನರ್ ಅಡಿಯಲ್ಲಿ ರಾಮ್ ಅಚಂತ ಮತ್ತು ಗೋಪಿಚಂದ್ ಅಚಂತ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಈ ಚಿತ್ರದಲ್ಲಿ ಬಾಲಯ್ಯಗೆ ಜೋಡಿಯಾಗಿ ಸಂಯುಕ್ತಾ ನಟಿಸಿದ್ದಾರೆ. ಆದಿ ಪಿನಿಸೆಟ್ಟಿ ಖಳನಾಯಕನಾಗಿ ಕಾಣಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.