ADVERTISEMENT

ಅಕ್ಷಯ್‌ ಕುಮಾರ್ ನಟನೆಯ ಬಚ್ಚನ್ ಪಾಂಡೆ 2022ರ ಗಣರಾಜ್ಯೋತ್ಸವದಂದು ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 24 ಜನವರಿ 2021, 7:55 IST
Last Updated 24 ಜನವರಿ 2021, 7:55 IST
ಅಕ್ಷಯ್‌ ಕುಮಾರ್
ಅಕ್ಷಯ್‌ ಕುಮಾರ್   

ಬಾಲಿವುಡ್‌ನ ಖ್ಯಾತ ನಟ ಅಕ್ಷಯ್ ಕುಮಾರ್ ನಟನೆಯ ಬಹುನಿರೀಕ್ಷಿತ ಬಚ್ಚನ್ ಪಾಂಡೆ ಸಿನಿಮಾ 2022ರ ಜನವರಿ 26 ರಂದು ಬಿಡುಗಡೆಯಾಗಲಿದೆ. ಈ ವಿಷಯವನ್ನು ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ಬಹಿರಂಗ ಪಡಿಸಿದ್ದಾರೆ ನಟ ಅಕ್ಷಯ್‌.

ಆ್ಯಕ್ಷನ್ ಕಾಮಿಡಿ ಕಥೆ ಹೊಂದಿರುವ ಈ ಚಿತ್ರಕ್ಕೆ ಸಾಜಿದ್ ನಾದಿಯಾವಾಲಾಹೂಡಿಕೆ ಮಾಡಿದ್ದಾರೆ. ಹೌಸ್‌ಫುಲ್ 4 ಖ್ಯಾತಿಯ ಫರ್ಹಾದ್ ಸಾಮ್ಜಿ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ.

ಈ ಚಿತ್ರದಲ್ಲಿ ಕೃತಿ ಸನೋನ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಜಾಕ್ವೆಲಿನ್ ಫೆರ್ನಾಂಡಿಸ್‌, ಅರ್ಷದ್ ವಾರ್ಸಿ ಹಾಗೂ ಪಂಕಜ್ ತ್ರಿಪಾಠಿ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಪ್ರಸ್ತುತರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಚಿತ್ರದ ಶೂಟಿಂಗ್ ನಡೆಯುತ್ತಿದೆ. ಎಲ್ಲವೂ ಸರಿಯಾಗಿದ್ದರೆ 2020ರ ಡಿಸೆಂಬರ್‌ಗೆ ಬಚ್ಚನ್ ಪಾಂಡೆ ಬಿಡುಗಡೆಯಾಗಬೇಕಿತ್ತು.

ADVERTISEMENT

ಅಕ್ಷಯ್, ರೋಹಿತ್ ಶೆಟ್ಟಿ ನಿರ್ದೇಶನದ ಸೂರ್ಯವಂಶಿಯಲ್ಲೂ ನಟಿಸುತ್ತಿದ್ದು ಈ ಚಿತ್ರದ ಬಿಡುಗಡೆಗಾಗಿ ಕಾಯುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.