ADVERTISEMENT

ಗಲ್ಲಾ ಪೆಟ್ಟಿಗೆಯಲ್ಲಿ ₹150 ಕೋಟಿಗೂ ಅಧಿಕ ಗಳಿಕೆ ಮಾಡಿದ ಸೂರ್ಯವಂಶಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ನವೆಂಬರ್ 2021, 10:57 IST
Last Updated 16 ನವೆಂಬರ್ 2021, 10:57 IST
ಸೂರ್ಯವಂಶಿ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಅತ್ಯಧಿಕ ಗಳಿಕೆಯತ್ತ ಸಾಗಿದೆ.
ಸೂರ್ಯವಂಶಿ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಅತ್ಯಧಿಕ ಗಳಿಕೆಯತ್ತ ಸಾಗಿದೆ.   

ಬೆಂಗಳೂರು: ಅಕ್ಷಯ್ ಕುಮಾರ್ ಮತ್ತು ಕತ್ರೀನಾ ಕೈಫ್ ನಟನೆಯ ಸೂರ್ಯವಂಶಿ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ವಿಶೇಷ ದಾಖಲೆ ಮಾಡಿದೆ.

ಚಿತ್ರ ಎರಡನೇ ವಾರದಲ್ಲಿ ಒಟ್ಟು ₹151.23 ಕೋಟಿ ಆದಾಯ ಗಳಿಸಿದೆ ಎಂದು ಮಾರುಕಟ್ಟೆ ವಿಶ್ಲೇಷಕ ತರಣ್ ಆದರ್ಶ್ ಟ್ವೀಟ್ ಮಾಡಿದ್ದಾರೆ.

ಅಲ್ಲದೆ, ಮೊದಲ ವಾರ ಮತ್ತು ಎರಡನೇ ವಾರದ ಗಳಿಕೆ ಹಾಗೂ ಏರಿಕೆ ಕುರಿತು ಅವರು ಪ್ರತ್ಯೇಕ ಟ್ವೀಟ್ ಮಾಡಿದ್ದು, ಸಿನಿಮಾಗೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ ಎಂದಿದ್ದಾರೆ.

ADVERTISEMENT

ರೋಹಿತ್ ಶೆಟ್ಟಿ ನಿರ್ದೇಶನದ ಸಿನಿಮಾ ಸೂರ್ಯವಂಶಿ, ಆ್ಯಕ್ಷನ್ ಪ್ರಧಾನ ಚಿತ್ರವಾಗಿದೆ. ದೀಪಾವಳಿ ಬಳಿಕ ಬಹುತೇಕ ಎಲ್ಲ ಚಿತ್ರಮಂದಿರಗಳು ತೆರೆದಿದ್ದು, ಜನರು ಮತ್ತೆ ಸಿನಿಮಾ ವೀಕ್ಷಣೆಗೆ ಬರುತ್ತಿದ್ದಾರೆ.

ಹೀಗಾಗಿ ಸಿನಿಮಾ ಉತ್ತಮ ಗಳಿಕೆಯತ್ತ ಸಾಗಿದೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.