ನವದೆಹಲಿ: ಬಾಲಿವುಡ್ ನಟ ಅಕ್ಷಯ್ ಕುಮಾರ್ ಅಭಿನಯದ ‘ಓಹ್ ಮೈ ಗಾಡ್ 2’ ಚಿತ್ರದ ಪೋಸ್ಟರ್ ಬಿಡುಗಡೆಯಾಗಿದ್ದು, ಅಭಿಮಾನಿಗಳಲ್ಲಿ ಭಾರಿ ನಿರೀಕ್ಷೆ ಮೂಡಿಸಿದೆ.
ಸದ್ಯ ಚಿತ್ರದ ಪೋಸ್ಟರ್ ಅನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿರುವ ಅಕ್ಷಯ್ ಕುಮಾರ್, ‘ಓಹ್ ಮೈ ಗಾಡ್ 2’ ಚಿತ್ರಕ್ಕೆ ನಿಮ್ಮೆಲ್ಲರ ಆಶೀರ್ವಾದ ಬೇಕಿದೆ. ಸಮಾಜದ ಒಂದು ಬಹುಮುಖ್ಯ ವಿಷಯದ ಮೇಲೆ ಬೆಳಕು ಚೆಲ್ಲುವ ನಮ್ಮ ಪ್ರಾಮಾಣಿಕ ಪ್ರಯತ್ನ ಇದಾಗಿದೆ. ಈ ಪಯಣದಲ್ಲಿ ಆದಿಯೋಗಿಯ ಆಶೀರ್ವಾದ ನಮ್ಮ ಮೇಲಿರಲಿ. ಹರ ಹರ ಮಹದೇವ್’ ಎಂದು ಬರೆದುಕೊಂಡಿದ್ದಾರೆ.
ಇದೇ ಪೋಸ್ಟರ್ ಅನ್ನು ನಟಿ ಯಾಮಿ ಗೌತಮ್ ಹಂಚಿಕೊಂಡಿದ್ದು, ‘ಓಹ್ ಮೈ ಗಾಡ್ 2’ ಚಿತ್ರವನ್ನು ಘೋಷಿಸಲು ಸಂತೋಷವಾಗಿದೆ. ಚಿತ್ರಕ್ಕೆ ನಿಮ್ಮ ಆಶೀರ್ವಾದ ಬೇಕಾಗಿದೆ’ ಎಂದು ಬರೆದುಕೊಂಡಿದ್ದಾರೆ.
ಅಮಿತ್ ರೈ ನಿರ್ದೇಶನದ ಈ ಚಿತ್ರದಲ್ಲಿ ಅಕ್ಷಯ್ ಕುಮಾರ್, ಯಾಮಿ ಗೌತಮ್, ಪರೇಶ್ ರಾವಲ್ ಮುಂತಾದವರು ನಟಿಸುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.