ADVERTISEMENT

‘ಪೃಥ್ವಿರಾಜ್’ ಟ್ರೈಲರ್‌: ಅಕ್ಷಯ್ ಕುಮಾರ್ ಮೋಡಿಗೆ ಅಭಿಮಾನಿಗಳು ಖುಷ್‌...

​ಪ್ರಜಾವಾಣಿ ವಾರ್ತೆ
Published 11 ಮೇ 2022, 7:00 IST
Last Updated 11 ಮೇ 2022, 7:00 IST
ಪೋಸ್ಟರ್‌
ಪೋಸ್ಟರ್‌   

ಮುಂಬೈ: ಬಾಲಿವುಡ್ ನಟ ಅಕ್ಷಯ್ ಕುಮಾರ್ ಅಭಿನಯದ ಬಹುನಿರೀಕ್ಷಿತ ‘ಪೃಥ್ವಿರಾಜ್’ ಸಿನಿಮಾದ ಟ್ರೈಲರ್‌ ಬಿಡುಗಡೆಯಾಗಿದ್ದು ಸಾಮಾಜಿಕ ಮಾಧ್ಯಮಗಳಲ್ಲಿ ಸದ್ದು ಮಾಡುತ್ತಿದೆ.

ಟ್ರೈಲರ್‌ ಬಿಡುಗಡೆಯಾಗಿ ಕೆಲವೇ ಗಂಟೆಗಳಲ್ಲಿ 5 ಕೋಟಿಗೂ ಹೆಚ್ಚು ವೀಕ್ಷಣೆ ಪಡೆದಿದೆ.‘ಪೃಥ್ವಿರಾಜ್’ ಸಿನಿಮಾ ಹಿಂದಿ, ತೆಲುಗು, ತಮಿಳು ಭಾಷೆಗಳಲ್ಲಿ ತೆರೆಕಾಣಲಿದೆ ಎಂದು ಚಿತ್ರತಂಡ ಹೇಳಿದೆ.

ಪೃಥ್ವಿರಾಜ್ ಸಿನಿಮಾವನ್ನು ಬರಹಗಾರ-ನಿರ್ದೇಶಕ ಚಂದ್ರಪ್ರಕಾಶ್ ದ್ವಿವೇದಿ ನಿರ್ದೇಶಿಸಿದ್ದಾರೆ. ಇದನ್ನು 'ಯಶ್ ರಾಜ್ ಫಿಲ್ಮ್ಸ್' ನಿರ್ಮಾಣ ಮಾಡಿದ್ದು, ಪೃಥ್ವಿರಾಜ್ ಚೌಹಾಣ್ ಪಾತ್ರದಲ್ಲಿ ಅಕ್ಷಯ್ ಕುಮಾರ್ ನಟಿಸಿದ್ದರೆ, ಅವರ ಎದುರು 2017ರ ಮಿಸ್ ವರ್ಲ್ಡ್ ವಿಜೇತೆ ಮಾನುಷಿ ಚಿಲ್ಲರ್ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಸಂಜಯ್ ದತ್‌, ಸೋನು ಸೂದ್‌ ಕೂಡ ನಟಿಸಿದ್ದಾರೆ.

ADVERTISEMENT

ಈ ಹಿಂದೆ ಜ.21ರಂದು ಚಿತ್ರ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಿಸಿತ್ತು. ಆದರೆ, ಕೋವಿಡ್‌ ಹಿನ್ನೆಲೆಯಲ್ಲಿ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿತ್ತು. ಇದೀಗ ಸಿನಿಮಾಜೂನ್ 3ರಂದು ಬಿಡುಗಡೆಯಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.