ಬಹುತೇಕ ಹೊಸಬರಿಂದಲೇ ಕೂಡಿರುವ ‘ಅಲೈಕ್ಯಾ’ ಚಿತ್ರದ ಟ್ರೇಲರ್ ಮತ್ತು ಹಾಡುಗಳು ಇತ್ತೀಚೆಗಷ್ಟೇ ಬಿಡುಗಡೆಗೊಂಡಿವೆ. ನಟ ಸುಚೇಂದ್ರಪ್ರಸಾದ್ ಹಾಗೂ ನಟಿ ಸಂಜನಾ ನಾಯ್ಡು ಟ್ರೇಲರ್ ಬಿಡುಗಡೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು.
ಹಾರರ್, ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರಕ್ಕೆ ಸಾತ್ವಿಕ್ ಎಂ.ಭೂಪತಿ ಕಥೆ ಬರೆದು, ಆ್ಯಕ್ಷನ್–ಕಟ್ ಹೇಳಿದ್ದಾರೆ. ‘ಒಂದಷ್ಟು ಸ್ನೇಹಿತರ ತಂಡ ವೀಕೆಂಡ್ ಕಳೆಯಲು ಗೆಸ್ಟ್‌ಹೌಸ್‌ಗೆ ಹೋಗುತ್ತಾರೆ. ಅಲ್ಲಿ ಅನಿರೀಕ್ಷಿತವಾಗಿ ನಡೆದ ಕೆಲವು ಘಟನೆಗಳಿಗಳಿಂದ ಆ ಅತಿಥಿ ಗೃಹದಲ್ಲಿ ಆತ್ಮಗಳಿರುವುದು ಗೊತ್ತಾಗಿ ಅಲ್ಲಿಂದ ತಪ್ಪಿಸಿಕೊಂಡು ಬರಲು ಪ್ರಯತ್ನಿಸಿ ವಿಫಲರಾಗುತ್ತಾರೆ. ಈ ಪಯಣವೇ ಚಿತ್ರದ ಕಥೆ’ ಎಂದರು ನಿರ್ದೇಶಕರು.
ಎಂ.ಭೂಪತಿ ಬಂಡವಾಳ ಹೂಡಿರುವ ಈ ಚಿತ್ರ ಬಿಡುಗಡೆಗೆ ಸಿದ್ಧವಿದೆ. ಬೆಂಗಳೂರು, ಚಿಕ್ಕಮಗಳೂರು, ಮೇಲುಕೋಟೆ ಸುತ್ತಮುತ್ತ ಚಿತ್ರೀಕರಣಗೊಂಡಿದೆ. ಸಾಯಿ ಸೋಮೇಶ್ ಸಂಗೀತ, ಬುಗುಡೆ ವೀರೇಶ್ ಛಾಯಾಚಿತ್ರಗ್ರಹಣ, ಮುತ್ತುರಾಜ್ ಸಂಕಲನ ಈ ಚಿತ್ರಕ್ಕಿದೆ. ದರ್ಶಿನಿ ಆರ್.ಒಡೆಯರ್, ನಿಸರ್ಗ ಮನ್ವೀರ್ ಚವ್ಹಾನ್, ವಿವೇಕ ಚಕ್ರವರ್ತಿ ಮುಂತಾದವರು ನಟಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.