ADVERTISEMENT

ಬಾಲಿವುಡ್‌ ನಟಿ ಆಲಿಯಾ ಭಟ್‌ಗೆ 29ನೇ ವರ್ಷದ ಜನ್ಮದಿನ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2022, 7:05 IST
Last Updated 15 ಮಾರ್ಚ್ 2022, 7:05 IST
ಆಲಿಯಾ ಭಟ್‌
ಆಲಿಯಾ ಭಟ್‌   

ಗಂಗೂಬಾಯಿ ಕಾಠಿಯಾವಾಡಿ ಸಿನಿಮಾದ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ನಟಿ ಆಲಿಯಾ ಭಟ್‌ಇಂದು (ಮಾ.15) 29ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ.

ಆಲಿಯಾ ಭಟ್‌, ಮನೆಯಲ್ಲಿ ಕುಟುಂಬದವರ ಸಮ್ಮುಖದಲ್ಲಿ ಸರಳವಾಗಿ ಜನ್ಮದಿನ ಆಚರಿಸಿಕೊಂಡಿದ್ದಾರೆ. ಅವರಿಗೆ ಬಾಲಿವುಡ್‌ ಸಿನಿಮಾ ತಾರೆಗಳು ಸಾಮಾಜಿಕ ಜಾಲತಾಣಗಳ ಮೂಲಕ ಶುಭಾಶಯಗಳನ್ನು ಕೋರುತ್ತಿದ್ದಾರೆ.

ಅಭಿಮಾನಿಗಳು ಕೂಡ ಸಾಮಾಜಿಕ ಮಾಧ್ಯಮಗಳ ಮೂಲಕ ನೆಚ್ಚಿನನಟಿಗೆ ಜನ್ಮದಿನದ ಶುಭಾಶಯಗಳ ಪೋಸ್ಟರ್‌ಗಳು, ವಿಡಿಯೊಗಳನ್ನು ಹಾಕುತ್ತಿದ್ದಾರೆ.

ADVERTISEMENT

ವಿಭಿನ್ನ ಪಾತ್ರಗಳ ಮೂಲಕ ಬಾಲಿವುಡ್‌ನಲ್ಲಿ ತಮ್ಮದೇ ಛಾಪು ಮೂಡಿಸಿರುವ ಆಲಿಯಾ ಭಟ್‌ ಸಿನಿಮಾರಂಗದಲ್ಲಿ ಬೇಡಿಕೆಯ ನಟಿಯಾಗಿದ್ದಾರೆ.

ಆಲಿಯಾ ಹುಟ್ಟುಹಬ್ಬದ ಸಂದರ್ಭದಲ್ಲಿ ’ಬ್ರಹ್ಮಾಸ್ತ್ರ’ ಚಿತ್ರತಂಡ ಆಲಿಯಾ ಭಟ್‌ ಅವರ ಫಸ್ಟ್‌ಲುಕ್‌ ವಿಡಿಯೊ ಬಿಡುಗಡೆ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.