ಹೈದರಾಬಾದ್: ಇತ್ತೀಚೆಗೆ ಬಿಡುಗಡೆಗೊಂಡ ಪುಷ್ಪ–2 ಚಿತ್ರ ಪ್ರದರ್ಶನ ವೇಳೆ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಟಾಲಿವುಡ್ ನಟ ಅಲ್ಲು ಅರ್ಜುನ್ ಅವರನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.
ಹೈದರಾಬಾದ್‌ನ ಅವರ ನಿವಾಸದಿಂದಲೇ ಬಂಧಿಸಲಾಗಿದೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ.
ಹೈದರಾಬಾದ್‌ನಲ್ಲಿ ಡಿ.4ರಂದು ಪುಷ್ಪ–2 ಪ್ರೀಮಿಯರ್ ಪ್ರದರ್ಶನದ ವೇಳೆ 35 ವರ್ಷದ ಮಹಿಳೆ ಮೃತಪಟ್ಟಿದ್ದು, ಆಕೆಯ ಎಂಟು ವರ್ಷದ ಮಗ ಗಾಯಗೊಂಡಿದ್ದ. ಹೈದರಾಬಾದ್‌ನಲ್ಲಿರುವ ಸಂಧ್ಯಾ ಚಿತ್ರಮಂದಿರದಲ್ಲಿ ಘಟನೆ ನಡೆದಿತ್ತು. ಈ ಸಂಬಂಧ ಮೃತ ಮಹಿಳೆಯ ಕುಟುಂಬ ಸದಸ್ಯರು ಡಿ.5 ರಂದು ಚಿತ್ರಮಂದಿರದ ಆಡಳಿತ ಮಂಡಳಿ, ಅಲ್ಲು ಅರ್ಜುನ್ ಹಾಗೂ ಅವರ ಭದ್ರತಾ ತಂಡದ ವಿರುದ್ಧ ಚಿಕ್ಕಡಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ವೇಳೆ ಪೊಲೀಸರು ಮೂವರನ್ನು ಬಂಧಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.