ADVERTISEMENT

40ನೇ ವಸಂತಕ್ಕೆ ಕಾಲಿಟ್ಟ ಅಲ್ಲು ಅರ್ಜುನ್‌: ರಶ್ಮಿಕಾ ಸೇರಿ ಗಣ್ಯರಿಂದ ಶುಭ ಹಾರೈಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 8 ಏಪ್ರಿಲ್ 2022, 7:31 IST
Last Updated 8 ಏಪ್ರಿಲ್ 2022, 7:31 IST
ಅಲ್ಲು ಅರ್ಜುನ್‌
ಅಲ್ಲು ಅರ್ಜುನ್‌   

ಹೈದರಾಬಾದ್: ತೆಲುಗು ನಟ ಅಲ್ಲು ಅರ್ಜುನ್‌ ಅವರು ಇಂದು (ಶುಕ್ರವಾರ) 40ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಟ್ವಿಟರ್‌ನಲ್ಲಿ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.

ಅಲ್ಲು ಅರ್ಜುನ್ ಹುಟ್ಟುಹಬ್ಬದ ಅಂಗವಾಗಿ ಮೆಗಾಸ್ಟಾರ್ ಚಿರಂಜೀವಿ, ನಟಿ ರಶ್ಮಿಕಾ ಮಂದಣ್ಣ ಸೇರಿದಂತೆ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಶುಭ ಹಾರೈಸಿದ್ದಾರೆ.

‘ಜನ್ಮದಿನದ ಶುಭಾಶಯಗಳು ಬನ್ನಿ. (ಅಲ್ಲು ಅರ್ಜುನ್) ನಿಮ್ಮ ಕಠಿಣ ಪರಿಶ್ರಮ ಮತ್ತು ಬದ್ಧತೆ ನಿಮಗೆ ಯಶಸ್ಸನ್ನು ತಂದುಕೊಡುತ್ತದೆ ಶುಭವಾಗಲಿ’ ಎಂದು ಚಿರಂಜೀವಿ ಟ್ವೀಟ್ ಮಾಡಿದ್ದಾರೆ.

‘ಹುಟ್ಟುಹಬ್ಬದ ಶುಭಾಶಯಗಳು ಅಲ್ಲು ಅರ್ಜುನ್ (ನನ್ನ ಪುಷ್ಪಾ...) ಜಗತ್ತು ಈಗಾಗಲೇ ನಿಮ್ಮನ್ನು ಪ್ರೀತಿಸುತ್ತಿದೆ. ಆದರೆ, ಈ ಜನ್ಮದಿನದಂದು ದೇಶದ ಪ್ರತಿ ಮೂಲೆಯಲ್ಲಿರುವ ಅಭಿಮಾನಿಗಳು ನಿಮ್ಮನ್ನು ಹೇಗೆ ಪ್ರೀತಿಸುತ್ತಾರೋ ಅದೇ ರೀತಿ ಜಗತ್ತು ನಿಮ್ಮನ್ನು ಪ್ರೀತಿಸುತ್ತದೆ ಎಂದು ನಾನು ಭಾವಿಸುತ್ತೇನೆ. ನಿಮ್ಮ ಮೇಲಿನ ಪ್ರೀತಿ ಮತ್ತು ಅಭಿಮಾನ ಸದಾ ಕಾಲ ಹೀಗೆ ಇರುತ್ತದೆ’ ಎಂದು ರಶ್ಮಿಕಾ ಟ್ವೀಟ್ ಮಾಡಿದ್ದಾರೆ.

ಇತ್ತೀಚಿಗೆ ಸುಕುಮಾರ್ ನಿರ್ದೇಶನದಲ್ಲಿ ಮೂಡಿಬಂದ ‘ಪುಷ್ಪ’ ಸಿನಿಮಾದಲ್ಲಿ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಹಾಗೂ ಸಮಂತಾ ಅಭಿನಯಿಸಿ ಸೈ ಎನಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಬಾಕ್ಸ್‌ ಆಫೀಸ್‌ನಲ್ಲಿ ₹365 ಕೋಟಿಗೂ ಅಧಿಕ ಹಣ ಗಳಿಸಿ ದಾಖಲೆ ಮಾಡಿದೆ.

ಅಲಾ ವೈಕುಂಟಪುರಮುಲೋ ಸಿನಿಮಾದ ಯಶಸ್ಸು ಅಲ್ಲು ಅರ್ಜುನ್ ನಟನಾ ಪಯಣಕ್ಕೆ ಮೈಲುಗಲ್ಲು ಹಾಕಿತ್ತು. ನಂತರ ಬಂದ ‘ಪುಷ್ಪ’ ಸಿನಿಮಾ ಅವರನ್ನು ಟಾಲಿವುಡ್‌ನಲ್ಲಿ ನಂಬರ್‌ 1 ಸ್ಥಾನಕ್ಕೆ ಏರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.