ADVERTISEMENT

ಒಟಿಟಿಯಲ್ಲಿ 'ರಿಪ್ಪನ್ ಸ್ವಾಮಿ' ಸಿನಿಮಾ ರಿಲೀಸ್: ಎಲ್ಲಿ ನೋಡಬಹುದು?

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಅಕ್ಟೋಬರ್ 2025, 9:14 IST
Last Updated 11 ಅಕ್ಟೋಬರ್ 2025, 9:14 IST
   

ಕಿಶೋರ್ ಮೂಡುಬಿದ್ರೆ ನಿರ್ದೇಶನದ ಪಂಚಾನನ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ‘ರಿಪ್ಪನ್ ಸ್ವಾಮಿ‘ ಚಿತ್ರವು ಒಟಿಟಿ ಫ್ಲಾಟ್‌ಫಾರ್ಮ್‌ ಅಮೇಜಾನ್ ಪ್ರೈಮ್‌ನಲ್ಲಿ ಲಭ್ಯವಿದೆ. ವಿಜಯ್ ರಾಘವೇಂದ್ರ ನಾಯಕನಾಗಿ ನಟಿಸಿರುವ ಈ ಸಿನಿಮಾ ಆಗಸ್ಟ್ 29ಕ್ಕೆ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು.

ಗ್ರಾಮೀಣ ಭಾಗದ ಸಸ್ಪೆನ್ಸ್ ಥ್ರಿಲ್ಲರ್ ಕಥೆ ಇದಾಗಿದ್ದು. ‘ರಿಪ್ಪನ್ ಸ್ವಾಮಿ' ಚಿತ್ರವು ಕೊಪ್ಪ, ಕಳಸ, ಬಾಳೆಹೊನ್ನೂರು ಸುತ್ತಮುತ್ತಲಿನ ಪರಿಸರದಲ್ಲಿ ಚಿತ್ರೀಕರಿಸಲಾಗಿದೆ.

ವಿಜಯ್ ರಾಘವೇಂದ್ರಗೆ ನಾಯಕಿಯಾಗಿ ಅಶ್ವಿನಿ ಚಂದ್ರಶೇಖರ್ ನಟಿಸಿದ್ದಾರೆ. ಪ್ರಕಾಶ್ ತುಮಿನಾಡು, ವಜ್ರದೀರ್ ಜೈನ್, ಯಮುನಾ ಶ್ರೀನಿಧಿ. ಮೋಹನ್ ಶೇಣಿ. ಕೃಷ್ಣಮೂರ್ತಿ ಕವತ್ತಾರ್, ಪ್ರಭಾಕರ್ ಕುಂದಾರ್ ಮುಂತಾದವರು ಚಿತ್ರದಲ್ಲಿದ್ದಾರೆ.

ADVERTISEMENT

ಚಿತ್ರಕ್ಕೆ ಸಿ.ಎಂ. ರಂಗನಾಥ್ ಛಾಯಾಚಿತ್ರಗ್ರಹಣ, ಶಶಾಂಕ್ ನಾರಾಯಣ ಸಂಕಲನವಿದೆ. ಮಲಯಾಳಂನ ಖ್ಯಾತ ಸಂಗೀತ ನಿರ್ದೇಶಕ ಸ್ಯಾಮ್ಯುವೆಲ್ ಅಭಿ ಅವರು ಸಂಗೀತ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.