ADVERTISEMENT

ಒಂದಾದ ದಿಗ್ಗಜರು; ‘ಕಲ್ಕಿ 2898 ಎಡಿ’ ಚಿತ್ರದಲ್ಲಿ ಅಮಿತಾಭ್ ಬಚ್ಚನ್, ಕಮಲ್ ಹಾಸನ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ಫೆಬ್ರುವರಿ 2026, 11:40 IST
Last Updated 24 ಫೆಬ್ರುವರಿ 2026, 11:40 IST
<div class="paragraphs"><p>ಅಮಿತಾಬ್ ಬಚ್ಚನ್ ಮತ್ತು ಕಮಲ್ ಹಾಸನ್</p></div>

ಅಮಿತಾಬ್ ಬಚ್ಚನ್ ಮತ್ತು ಕಮಲ್ ಹಾಸನ್

   

ಎಕ್ಸ್‌ ಚಿತ್ರ

ಬಾಲಿವುಡ್ ಮೆಗಾಸ್ಟಾರ್ ಅಮಿತಾಭ್ ಬಚ್ಚನ್ ಹಾಗೂ ನಟ ಕಮಲ್ ಹಾಸನ್ ಅವರು ಮತ್ತೆ ಒಂದಾಗಿ ನಟಿಸೋದಕ್ಕೆ ಸಜ್ಜಾಗಿದ್ದಾರೆ. ಪ್ರಭಾಸ್ ನಟನೆಯ ಕಲ್ಕಿ 2898 ಎಡಿ ಸಿನಿಮಾದ ಚಿತ್ರೀಕರಣ ಆರಂಭವಾದ ಬೆನ್ನಲ್ಲೆ ಚಿತ್ರತಂಡ ಅಪ್‌ಡೇಟ್‌ ಒಂದನ್ನು ಕೊಟ್ಟಿದೆ.

ADVERTISEMENT

ಅಮಿತಾಬ್ ಬಚ್ಚನ್ ಮತ್ತು ಕಮಲ್ ಹಾಸನ್

ಈಗಾಗಲೇ ಈ ಸಿನಿಮಾ ಚಿತ್ರೀಕರಣ ಅಧಿಕೃತವಾಗಿ ಆರಂಭಗೊಂಡಿದ್ದು, ಅಮಿತಾಭ್ ಬಚ್ಚನ್ ಹಾಗೂ ಕಮಲ್ ಹಾಸನ್ ಜೋಡಿ ಈ ಸಿನಿಮಾದಲ್ಲಿ ಕಾಣಸಿಕೊಳ್ಳಲಿದ್ದಾರೆ. ಈ ಜೋಡಿಯ ಫೋಟೊ ನೋಡಿ ಅಭಿಮಾನಿಗಳು ಖುಷಿ ಪಟ್ಟಿದ್ದಾರೆ.

ಅಮಿತಾಬ್ ಬಚ್ಚನ್ ಮತ್ತು ಕಮಲ್ ಹಾಸನ್

ನಾಗ್ ಅಶ್ವಿನ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಕಲ್ಕಿ 2898 ಎಡಿ ಸಿನಿಮಾದ ಚಿತ್ರೀಕರಣ ಈಗಾಗಲೇ ಆರಂಭಗೊಂಡಿದ್ದು, ಇದೇ ವೇಳೆ ಅಮಿತಾಭ್ ಬಚ್ಚನ್ ಅವರು ಕಮಲ್ ಹಾಸನ್‌ ಅವರನ್ನು ಭೇಟಿ ಮಾಡಿರುವ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಫೋಟೊದಲ್ಲಿ ಅಮಿತಾಭ್ ಬಚ್ಚನ್ ಅವರು ತಮ್ಮ ಪಾತ್ರದ ಅಶ್ವತ್ಥಾಮನ ವೇಷಭೂಷಣದಲ್ಲಿ ಕಾಣಿಸಿಕೊಂಡಿದ್ದಾರೆ.

ಅಮಿತಾಬ್ ಬಚ್ಚನ್

ವಿಶೇಷ ಎಂದರೆ ಅಮಿತಾಭ್ ಬಚ್ಚನ್ ಹಾಗೂ ನಟ ಕಮಲ್ ಹಾಸನ್ ಅವರು ಕೊನೆಯ ಬಾರಿಗೆ 1985ರಲ್ಲಿ ತೆರೆಕಂಡಿದ್ದ ‘ಗೆರಾಫ್ತಾರ್’ ಸಿನಿಮಾದಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಆ ಬಳಿಕ ಕಲ್ಕಿ ಮೊದಲ ಭಾಗದಲ್ಲಿ ಕೂಡ ಈ ಇಬ್ಬರು ಒಟ್ಟಿಗೆ ಕಾಣಿಸಿಕೊಂಡಿದ್ದರು.

ಅಮಿತಾಬ್ ಬಚ್ಚನ್

ಇದೀಗ ಕಲ್ಕಿ 2898 ಎಡಿ ಸಿನಿಮಾದ ಮೂಲಕ ಅಮಿತಾಭ್ ಬಚ್ಚನ್ ಹಾಗೂ ಕಮಲ್ ಹಾಸನ್ ಮತ್ತೆ ಒಂದಾಗುತ್ತಿದ್ದಾರೆ. ಇಬ್ಬರು ಜನಪ್ರಿಯ ನಟರನ್ನು ತೆರೆ ಮೇಲೆ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.