ADVERTISEMENT

ಅಮಿತಾಬ್‌ ಜೊತೆ ಅಭಿಷೇಕ್‌ ಬಚ್ಚನ್‌ಗೂ ಕೊರೊನಾ ಸೋಂಕು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಜುಲೈ 2020, 2:05 IST
Last Updated 12 ಜುಲೈ 2020, 2:05 IST
ಅಭಿಷೇಕ್ ಮತ್ತು ಅಮಿತಾಬ್‌ ಬಚ್ಚನ್‌‌
ಅಭಿಷೇಕ್ ಮತ್ತು ಅಮಿತಾಬ್‌ ಬಚ್ಚನ್‌‌    

ಮುಂಬೈ: ಬಾಲಿವುಡ್‌ನ ಖ್ಯಾತ ನಟ ಅಮಿತಾಬ್ ಬಚ್ಚನ್ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟ ಬೆನ್ನಲ್ಲೇ ಅವರ ಪುತ್ರ, ನಟ ಅಭಿಷೇಕ್‌ ಬಚ್ಚನ್‌ ಅವರಲ್ಲೂ ಕೋವಿಡ್‌-19 ಪತ್ತೆಯಾಗಿದೆ.

ಅಮಿತಾಬ್ ಬಚ್ಚನ್ (77) ಮತ್ತು ಪುತ್ರ ಅಭಿಷೇಕ್ (44) ಅವರನ್ನು ಶನಿವಾರ ಸಂಜೆ ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅವರಿಬ್ಬರಲ್ಲೂ ಕೋವಿಡ್‌-19 ಲಕ್ಷಣಗಳು ಕಾಣಿಸಿಕೊಂಡಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

ADVERTISEMENT

'ನನಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆಸ್ಪತ್ರೆಗೆ ದಾಖಲಾಗಿದ್ದೇನೆ. ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಕುಟುಂಬಸ್ಥರು ಮತ್ತು ಸಿಬ್ಬಂದಿಗೂ ಪರೀಕ್ಷೆ ಮಾಡಿಸಲಾಗಿದ್ದು, ವರದಿಗಾಗಿ‌ ಕಾಯುತ್ತಿದ್ದೇವೆ. ಕಳೆದ 10 ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಪರೀಕ್ಷೆ ಮಾಡಿಸಿಕೊಳ್ಳಬೇಕಾಗಿ ವಿನಂತಿಸುತ್ತೇನೆ,' ಎಂದು ಅಮಿತಾಬ್‌ ಬಚ್ಚನ್‌ ಟ್ವೀಟ್ ಮಾಡಿದ್ದಾರೆ.

ಇದರ ಬೆನ್ನಲ್ಲೇ ಟ್ವೀಟ್‌ ಮಾಡಿರುವ ಅಭಿಷೇಕ್‌ ಬಚ್ಚನ್‌, 'ಇಂದು (ಶನಿವಾರ) ಮುಂಜಾನೆ ನಾನು ಮತ್ತು ನನ್ನ ತಂದೆ ಇಬ್ಬರಿಗೂ ನಡೆಸಿದ ಪರೀಕ್ಷೆಯಲ್ಲಿ ಕೋವಿಡ್‌ ಪೊಸಿಟಿವ್‌ ವರದಿ ಬಂದಿದೆ. ನಾವಿಬ್ಬರೂ ಕಡಿಮೆ ರೋಗಲಕ್ಷಣಗಳನ್ನು ಹೊಂದಿದ್ದು, ಆಸ್ಪತ್ರೆಗೆ ದಾಖಲಾಗಿದ್ದೇವೆ. ಅಗತ್ಯವಿರುವ ಎಲ್ಲಾ ಮಾಹಿತಿಗಳನ್ನು ಅಧಿಕಾರಿಗಳಿಗೆ ನೀಡಿದ್ದೇವೆ. ನಮ್ಮ ಕುಟುಂಬ ಮತ್ತು ಸಿಬ್ಬಂದಿಯನ್ನು ಪರೀಕ್ಷಿಸಲಾಗುತ್ತಿದೆ. ಎಲ್ಲರೂ ಶಾಂತವಾಗಿರಿ ಮತ್ತು ಆತಂಕ ಪಡಬೇಡಿ' ಎಂದು ವಿನಂತಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.