ADVERTISEMENT

ಬಾಲಿವುಡ್‌ ನಟ ಅಮಿತಾಭ್ ಬಚ್ಚನ್‌ ನಿವಾಸದ ಉದ್ಯೋಗಿಯೊಬ್ಬರಿಗೆ ಕೋವಿಡ್ ದೃಢ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಜನವರಿ 2022, 7:15 IST
Last Updated 5 ಜನವರಿ 2022, 7:15 IST
ನಟ ಅಮಿತಾಭ್‌ ಬಚ್ಚನ್‌
ನಟ ಅಮಿತಾಭ್‌ ಬಚ್ಚನ್‌   

ಮುಂಬೈ: ಬಾಲಿವುಡ್‌ನ ಖ್ಯಾತ ನಟ ಅಮಿತಾಭ್‌ ಬಚ್ಚನ್‌ ಅವರ ನಿವಾಸದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಉದ್ಯೋಗಿ ಒಬ್ಬರಿಗೆ ಕೋವಿಡ್ ಇರುವುದು ದೃಢಪಟ್ಟಿದೆ.

ಅಮಿತಾಭ್‌ ಅವರಮುಂಬೈನ ಜಲ್ಸಾ ನಿವಾಸದಲ್ಲಿ ಈ ನೌಕರ ಕೆಲಸ ಮಾಡುತ್ತಿದ್ದರು.ಜ.2ರಂದು ಅವರನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.

ಅಮಿತಾಭ್‌ಅವರ ಜಲ್ಸಾದಲ್ಲಿ ಕಾರ್ಯನಿರ್ವಹಿಸುತ್ತಿರುವ ಒಟ್ಟು 31 ಸಿಬ್ಬಂದಿಯನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅದರಲ್ಲಿ ಒಬ್ಬರಿಗೆ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ.

ADVERTISEMENT

ಕಳೆದ ವರ್ಷದ ಜೂನ್‌ನಲ್ಲಿ ಅಮಿತಾಭ್‌ ಅವರಿಗೆ ಕೋವಿಡ್‌ ಇರುವುದು ದೃಢಪಟ್ಟಿತ್ತು. ಅವರು ಮುಂಬೈ ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.