ADVERTISEMENT

ಬಾಲಿವುಡ್‌ನ ಖ್ಯಾತ ನಟ ಅಮಿತಾಬ್ ಬಚ್ಚನ್‌ಗೆ ಕೋವಿಡ್-19 ದೃಢ

ಏಜೆನ್ಸೀಸ್
Published 11 ಜುಲೈ 2020, 17:59 IST
Last Updated 11 ಜುಲೈ 2020, 17:59 IST
   

ಮುಂಬೈ: ಬಾಲಿವುಡ್‌ನ ಖ್ಯಾತ ನಟ ಅಮಿತಾಬ್ ಬಚ್ಚನ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ.

ಈ ವಿಚಾರವನ್ನು ಸ್ವತಃ ಅಮಿತಾಬ್ ಬಚ್ಚನ್ ಅವರೇ ಟ್ವೀಟ್ ಮಾಡಿ ಖಚಿತಪಡಿಸಿದ್ದಾರೆ.

'ನನಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆಸ್ಪತ್ರೆಗೆ ದಾಖಲಾಗಿದ್ದೇನೆ. ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಕುಟುಂಬಸ್ಥರು ಮತ್ತು ಸಿಬ್ಬಂದಿಗೂ ಪರೀಕ್ಷೆ ಮಾಡಿಸಲಾಗಿದ್ದು, ವರದಿಗಾಗಿ‌ ಕಾಯುತ್ತಿದ್ದೇವೆ. ಈ 10 ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಪರೀಕ್ಷೆ ಮಾಡಿಸಿಕೊಳ್ಳ ಬೇಕಾಗಿ ವಿನಂತಿಸುತ್ತೇನೆ,' ಎಂದು ಅವರು ಟ್ವೀಟ್ ಮಾಡಿದ್ದಾರೆ.

ADVERTISEMENT

ಮುಂಬೈನ ನಾನಾವತಿ ಆಸ್ಪತ್ರೆಗೆ ಅವರು ದಾಖಲಾಗಿದ್ದಾರೆ ಎಂದು ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.