ADVERTISEMENT

ಚಿತ್ರಗಳಲ್ಲಿ ನೋಡಿ: ಅಭಿಮಾನಿಗಳ ಮನ ಗೆದ್ದ ತೆಲುಗಿನ ಅನಸೂಯ...

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2021, 11:40 IST
Last Updated 9 ಅಕ್ಟೋಬರ್ 2021, 11:40 IST
ಅನಸೂಯ
ಅನಸೂಯ   

ತೆಲುಗಿನ ಖ್ಯಾತ ನಿರೂಪಕಿ ಅನಸೂಯ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ನೂತನ ಚಿತ್ರಗಳನ್ನು ಪೋಸ್ಟ್‌ ಮಾಡುವ ಮೂಲಕ ಅಭಿಮಾನಿಗಳ ಮನ ಗೆದ್ದಿದ್ದಾರೆ.

ಕಿರುತೆರೆಯಲ್ಲಿ ಹಲವಾರು ರಿಯಾಲಿಟಿ ಶೋಗಳನ್ನು ನಡೆಸಿಕೊಡುವ ಅನಸೂಯ ಆಂಧ್ರ ಹಾಗೂ ತೆಲಂಗಾಣದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿದ್ದಾರೆ.

ಈಟಿವಿಯಲ್ಲಿ ಪ್ರಸಾರವಾಗುವ ಜಬರ್ದಸ್ಥ್ ಹಾಸ್ಯ ಕಾರ್ಯಕ್ರಮದಲ್ಲಿ ಅನಸೂಯ ನಿರೂಪಣೆ ಮಾಡುತ್ತಿದ್ದಾರೆ. ಈ ಶೋ ದಕ್ಷಿಣ ಭಾರತದಲ್ಲೇ ಹೆಚ್ಚು ಜನಪ್ರಿಯವಾದ ಕಾರ್ಯಕ್ರಮವಾಗಿದೆ.

ADVERTISEMENT

ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುವ ಅನಸೂಯ ಪದೇ ಪದೇ ಪೋಸ್ಟ್‌ಗಳನ್ನು ಶೇರ್‌ ಮಾಡುವ ಮೂಲಕ ಅಭಿಮಾನಿಗಳಿಗೆ ಹತ್ತಿರವಾಗಿದ್ದಾರೆ.

ಕಿರುತೆರೆ ಮಾತ್ರವಲ್ಲದೆ ಅನಸೂಯ ತೆಲುಗಿನ ಹಲವು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.