ಸ್ಟಾರ್ಟ್‌ಅಪ್ ಉದ್ಯಮಿ ಅನಿಲ್ ಶೆಟ್ಟಿ ನಟನೆಯ ಹೊಸ ಸಿನಿಮಾದ ಶೀರ್ಷಿಕೆ ಅನಾವರಣಗೊಂಡಿದೆ.
ಚಿತ್ರಕ್ಕೆ ‘ಲಂಬೋದರ 2.0’ ಎಂಬ ಶೀರ್ಷಿಕೆ ಇಡಲಾಗಿದೆ. ಅನಿಲ್ ಶೆಟ್ಟಿ ಅವರ ಹೋಂ ಬ್ಯಾನರ್ ಮಾಸ್ ಪ್ರೊಡಕ್ಷನ್ ಕಂಪನಿ ನಿರ್ಮಾಣ ಮಾಡುತ್ತಿರುವ ಈ ಸಿನಿಮಾದಲ್ಲಿ ಅನಿಲ್ ನಾಯಕ ನಟನಾಗಿ ನಟಿಸಲಿದ್ದು, ಈ ಮೂಲಕ ಚಿತ್ರರಂಗಕ್ಕೆ ಹೆಜ್ಜೆ ಇಡಲಿದ್ದಾರೆ.
‘ಬ್ಯಾಚುಲರ್ ಪಾರ್ಟಿ’ ಚಿತ್ರದ ನಿರ್ದೇಶಕ ಅಭಿಜಿತ್ ಮಹೇಶ್ ಈ ಚಿತ್ರಕ್ಕೆ ಚಿತ್ರಕಥೆ ಮತ್ತು ಸಂಭಾಷಣೆ ಬರೆಯುತ್ತಿದ್ದು ಸದ್ಯದಲ್ಲೇ ಇಡೀ ಚಿತ್ರತಂಡದ ಘೋಷಣೆಯಾಗಲಿದೆ ಎಂದಿದ್ದಾರೆ ಅನಿಲ್.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.