ADVERTISEMENT

‘ದಿ ಕಾಶ್ಮೀರ್ ಫೈಲ್ಸ್‘: ಚಿತ್ರ ನೋಡಿ ಅನುಪಮ್ ಖೇರ್‌ಗೆ ಕರೆ ಮಾಡಿದ ಸಲ್ಮಾನ್ ಖಾನ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಮಾರ್ಚ್ 2022, 5:17 IST
Last Updated 28 ಮಾರ್ಚ್ 2022, 5:17 IST
‘ದಿ ಕಾಶ್ಮೀರ್ ಫೈಲ್ಸ್‘ ಸಿನಿಮಾ
‘ದಿ ಕಾಶ್ಮೀರ್ ಫೈಲ್ಸ್‘ ಸಿನಿಮಾ   

ಬೆಂಗಳೂರು: ‘ದಿ ಕಾಶ್ಮೀರ್ ಫೈಲ್ಸ್‘ ಸಿನಿಮಾ ವೀಕ್ಷಿಸಿದ ಬಳಿಕ ಹಲವು ಮಂದಿ ಸೆಲೆಬ್ರಿಟಿಗಳು ಚಿತ್ರತಂಡವನ್ನು, ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಮತ್ತು ಕಾಶ್ಮೀರಿ ಪಂಡಿತರ ಪಾತ್ರ ಮಾಡಿದ ಅನುಪಮ್ ಖೇರ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಈ ಸಾಲಿಗೆ ಹೊಸ ಸೇರ್ಪಡೆಯಂದರೆ ಸಲ್ಲೂ ಬಾಯ್! ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ನೋಡಿದ ಬಳಿಕ ಅವರು, ಪ್ರಮುಖ ನಟ ಅನುಪಮ್ ಖೇರ್ ಅವರಿಗೆ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.

ಚಿತ್ರ ವೀಕ್ಷಿಸಿದ ಬಳಿಕ ಹಲವು ಮಂದಿ ಸಿನಿಮಾ ತಂಡಕ್ಕೆ ಅಭಿನಂದನೆ ಸಲ್ಲಿಸಿರುವುದನ್ನು ನಿರ್ದೇಶಕರು ಹೇಳಿಕೊಂಡಿದ್ದರು.

ADVERTISEMENT

ಈ ಬಾರಿ, ಅನುಪಮ್ ಖೇರ್ ಅವರು ತಮಗೆ ಸಲ್ಮಾನ್ ಖಾನ್ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ ಎಂದು ತಿಳಿಸಿದ್ದಾರೆ.

ಸಲ್ಮಾನ್ ಖಾನ್ ಜತೆಗೆ ಅನುಪಮ್ ಖೇರ್ ಹಲವು ಸಿನಿಮಾಗಳಲ್ಲಿ ಜತೆಯಾಗಿ ನಟಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.