ನವದೆಹಲಿ: ಬಹುಭಾಷಾ ನಟಿ ಅನುಷ್ಕಾ ಶೆಟ್ಟಿ ಅವರು ಕೆಲವು ಸಮಯ ಸಾಮಾಜಿಕ ಜಾಲತಾಣಗಳಿಂದ ದೂರವಿರುವುದಾಗಿ ಇನ್‌ಸ್ಟಾಗ್ರಾಮ್‌ನಲ್ಲಿ ಶುಕ್ರವಾರ ಪೋಸ್ಟ್ ಮಾಡಿದ್ದಾರೆ.
ಇನ್‌ಸ್ಟಾಗ್ರಾಮ್‌ನಲ್ಲಿ ಕೈ ಬರಹದ ಚಿತ್ರವನ್ನು ಹಂಚಿಕೊಂಡಿರುವ ನಟಿ ಅನುಷ್ಕಾ ಶೆಟ್ಟಿ ‘ ಜಗತ್ತಿನೊಂದಿಗೆ ಬೆರೆಯಲು ಹಾಗೂ ಸ್ಕ್ರೋಲಿಂಗ್‌ಗಿಂತ ಬೇರೆ ಕೆಲಸ ಮಾಡುವುದಕ್ಕಾಗಿ ಕೆಲ ಕಾಲ ಸಾಮಾಜಿಕ ಜಾಲತಾಣಗಳಿಂದ ದೂರ ಉಳಿಯಲಿದ್ದೇನೆ’ ಎಂದು ಪೋಸ್ಟ್ ಮಾಡಿದ್ದಾರೆ.
ಬಾಹುಬಲಿ, ಅರುಧಂತಿ ಮುಂತಾದ ಹಿಟ್ ಸಿನಿಮಾಗಳನ್ನು ನೀಡಿರುವ 43 ವರ್ಷದ ನಟಿ ಅನುಷ್ಕಾ, ಕ್ರಿಶ್ ಜಗಲಮರುಡು ನಿರ್ದೇಶನದ ‘ಘಾಟಿ’ ಸಿನಿಮಾದಲ್ಲಿ ನಟಿಸಿದ್ದರು. ಸೆ.5 ರಂದು ಬಿಡುಗಡೆಯಾಗಿದ್ದ ಸಿನಿಮಾವು ನಿರೀಕ್ಷಿತ ಯಶಸ್ಸು ಗಳಿಸಿರಲಿಲ್ಲ.
ಘಾಟಿ ಸಿನಿಮಾದ ಸೋಲಿನ ನಂತರ ಸಾಮಾಜಿಕ ಜಾಲತಾಣಗಳಿಂದ ದೂರ ಉಳಿಯಲು ನಟಿ ಅನುಷ್ಕಾ ಶೆಟ್ಟಿ ನಿರ್ಧರಿಸಿದ್ದು, ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.