
‘ಅಣ್ಣಯ್ಯ’ ಧಾರಾವಾಹಿ ಮೂಲಕ ಗುರುತಿಸಿಕೊಂಡಿರುವ ವಿಕಾಶ್ ಉತ್ತಯ್ಯ ನಾಯಕನಾಗಿ ನಟಿಸಿರುವ, ಅಭಿಜಿತ್ ತೀರ್ಥಹಳ್ಳಿ ನಿರ್ದೇಶನದ ‘ಅಪಾಯವಿದೆ ಎಚ್ಚರಿಕೆ’ ಸಿನಿಮಾ ಜನವರಿಯಲ್ಲಿ ತೆರೆಕಾಣಲಿದೆ.
ಈ ಸಿನಿಮಾವನ್ನು ವಿ.ಜಿ.ಮಂಜುನಾಥ್ ಹಾಗೂ ಪೂರ್ಣಿಮಾ ಎಂ.ಗೌಡ ನಿರ್ಮಾಣ ಮಾಡಿದ್ದಾರೆ. ಇತ್ತೀಚಿಗೆ ಈ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಯಿತು.
‘ಚಿತ್ರರಂಗಕ್ಕೂ ನನಗೂ ಹತ್ತು ವರ್ಷಗಳ ನಂಟು. ಸಹ ನಿರ್ದೇಶಕನಾಗಿ ಕೆಲಸ ಮಾಡಿದ ಅನುಭವ ಇರುವ ನಾನು, ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕನಾಗುತ್ತಿದ್ದೇನೆ. ಪಂಚಭೂತಗಳ ಆಧಾರದ ಮೇಲೆ ಈ ಚಿತ್ರದ ಕಥೆ ಹೆಣೆಯಲಾಗಿದೆ. ವಿಕಾಶ್ ಉತ್ತಯ್ಯ ‘ಸೂರಿ’ ಎಂಬ ಪಾತ್ರದಲ್ಲಿ, ರಾಘವ್ ಕೊಡಚಾದ್ರಿ ಹಾಗೂ ಮಿಥುನ್ ತೀರ್ಥಹಳ್ಳಿ ವಿಕಾಶ್ ಅವರ ಸ್ನೇಹಿತರಾಗಿ ಕಾಣಿಸಿಕೊಂಡಿದ್ದಾರೆ. ರಾಧಾ ಭಗವತಿ ‘ರಾಧಾ’ ಎಂಬ ಹೆಸರಿನಲ್ಲಿ ಬ್ರಾಹ್ಮಣ ಹುಡುಗಿಯ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಸಸ್ಪೆನ್ ಅಡ್ವೆಂಚರ್ ಹಾರಾರ್ ಜಾನಾರ್‌ನಲ್ಲಿ ಈ ಚಿತ್ರವಿದೆ’ ಎಂದರು ಅಭಿಜಿತ್ ತೀರ್ಥಹಳ್ಳಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.