
ಈ ಹಿಂದೆ ‘ತಾಯವ್ವ’ ಎಂಬ ಸಿನಿಮಾದಲ್ಲಿ ನಟಿಸಿದ್ದ ಗೀತಪ್ರಿಯ ಸುರೇಶ್ ಕುಮಾರ್ ಮುಖ್ಯಭೂಮಿಕೆಯಲ್ಲಿರುವ ‘ಅಪರಿಚಿತೆ’ ಸಿನಿಮಾದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ.
ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಟ್ರೇಲರ್ ಬಿಡುಗಡೆ ಮಾಡಿದರು. ನಟಿ ತಾರಾ ಅನುರಾಧ ಅವರು ಚಿತ್ರದ ಹಾಡೊಂದನ್ನು ಇದೇ ವೇಳೆ ರಿಲೀಸ್ ಮಾಡಿದರು.
ಸಿನಿಮಾ ಕುರಿತು ಮಾತನಾಡಿದ ಗೀತಪ್ರಿಯ, ‘1985ರಲ್ಲಿ ನಾನು ಹಾಗೂ ನನ್ನ ಪತಿ ಸೇರಿ ಶಿಕ್ಷಣ ಸಂಸ್ಥೆ ಆರಂಭಿಸಿದ್ದೆವು. ಈ ಸಂಸ್ಥೆಯಲ್ಲಿ ಈಗ ಹತ್ತು ಸಾವಿರ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ನನ್ನ ಪತಿ ಸುರೇಶ್ ಕುಮಾರ್ ಅವರೇ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ನಾನು ಜವಾಬ್ದಾರಿಯುತ ಶಿಕ್ಷಕಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ನಿರ್ದೇಶಕ ವಿಶ್ವನಾಥ್ ಕಥೆ ಹೇಳುವ ಸಂದರ್ಭದಲ್ಲಿ ಸಮಾಜಕ್ಕೆ ಏನಾದರೂ ಉತ್ತಮ ಸಂದೇಶ ನೀಡುವ ಕಥೆಯಾದರಷ್ಟೇ ನಟನೆ ಮಾಡುವುದಾಗಿ ಹೇಳಿದ್ದೆ. ಇದು ಅಂತಹ ಕಥೆ. ರಾಮನಗರದಲ್ಲಿ ಚಿತ್ರೀಕರಣ ನಡೆದಿದೆ. ಕ್ರಿಸ್‌ಮಸ್ ವೇಳೆಗೆ ಚಿತ್ರ ಬಿಡುಗಡೆಯಾಗಲಿದೆ’ ಎಂದರು.
ಚಿತ್ರಕ್ಕೆ ವಿಶ್ವನಾಥ ಆ್ಯಕ್ಷನ್ ಕಟ್ ಹೇಳುತ್ತಿದ್ದು, ಸಿಂಧು ಲೋಕನಾಥ್, ಆರ್.ಜೆ.ನಿಖಿತಾ, ನಟ ಶ್ರೀನಾಥ್ ಹಾಗೂ ಶ್ರೀನಾಥ್ ಅವರ ಪುತ್ರ ರೋಹಿತ್ ಪ್ರಮುಖ ಪಾತ್ರದಲ್ಲಿದ್ದಾರೆ. ಥ್ರಿಲ್ಲರ್ ಜಾನರ್‌ನಲ್ಲಿ ಈ ಸಿನಿಮಾವಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.