ಬೆಂಗಳೂರು: ಚಂದನವನದ ಬೇಡಿಕೆಯ ನಟಿ ಅದಿತಿ ಪ್ರಭುದೇವ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂನಲ್ಲಿಅದಿತಿಫೋಟೊವನ್ನು ಹಂಚಿಕೊಂಡಿದ್ದಾರೆ. ಫೋಟೊದ ಜತೆಯಲ್ಲಿ‘ಒಂದು ಕನಸಿನಂತೆ ಈ ಕನಸು ನಿಜವಾಗಿದೆ’ ಎಂದು ಬರೆದುಕೊಂಡಿದ್ದಾರೆ. ಆದರೆ ಅವರು ನಿಶ್ಚಿತಾರ್ಥದ ವಿಷಯವನ್ನು ಹಂಚಿಕೊಂಡಿಲ್ಲ
ಅದಿತಿ, ಹುಡಗನೊಬ್ಬನ ಜತೆ ಇರುವ ಫೋಟೋ ಹಾಕಿದ್ದಾರೆ. ಅದರಲ್ಲಿ ಅವರು ಹಾಕಿರುವ ಉಂಗುರ ಹೈಲೈಟ್ ಆಗಿದೆ. ಈ ಕಾರಣಕ್ಕೆ ಅಭಿಮಾನಿಗಳು ಸೇರಿದಂತೆ ಹಲವರುಶುಭಾಶಯಗಳನ್ನುಹೇಳುತ್ತಿದ್ದಾರೆ. ಇದರ ಬಗ್ಗೆ ಅದಿತಿಯ ಆಪ್ತರು, ಗೆಳೆಯರು ಹಾಗೂ ಕುಟುಂಬದವರು ಯಾವುದೇ ಮಾಹಿತಿ ನೀಡಿಲ್ಲ.
ಭಾನುವಾರ (ಡಿಸೆಂಬರ್ 26) ಅದಿತಿ ಅವರು ಹೊಳೆನರಸೀಪುರದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.ಹುಡುಗ ಉದ್ಯಮಿಯಾಗಿದ್ದು ದಾವಣಗೆರೆ ಮೂಲದವರು ಎನ್ನಲಾಗಿದೆ.
ಇತ್ತೀಚೆಗೆ ಅದಿತಿ ನಟನೆಯ ‘ಆನ’ ಸಿನಿಮಾ ಬಿಡುಗಡೆಯಾಗಿ ಮಿಶ್ರ ಪ್ರತಿಕ್ರಿಯೆ ಪಡೆದಿದೆ. ಅವರ ಇನ್ನು ಎರಡುಸಿನಿಮಾಗಳು ಬಿಡುಗಡೆಗೆ ಸಿದ್ಧವಾಗಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.