ADVERTISEMENT

10ರಂದು 'ಅರ್ಜುನ್‌ ಗೌಡ' ಟ್ರೇಲರ್‌ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2021, 10:55 IST
Last Updated 2 ಏಪ್ರಿಲ್ 2021, 10:55 IST
ಪ್ರಜ್ವಲ್‌ ದೇವರಾಜ್‌
ಪ್ರಜ್ವಲ್‌ ದೇವರಾಜ್‌   

ರಾಮು ಫಿಲಂಸ್ ಸಂಸ್ಥೆಯಿಂದ ನಿರ್ಮಾಣವಾಗಿರುವ ‘ಅರ್ಜುನ್ ಗೌಡ’ ಚಿತ್ರ‌ದ ಟ್ರೇಲರ್‌ ಏ. 10ರಂದು ಆನಂದ್ ಆಡಿಯೋದ ಯುಟ್ಯೂಬ್‌ ಚಾನೆಲ್‌ನಲ್ಲಿ ಬಿಡುಗಡೆಯಾಗಲಿದೆ. ಕೂಡ ಆಕ್ಷನ್ ಕಥಾಹಂದರ ಹೊಂದಿರುವ ಚಿತ್ರ. ಪ್ರಜ್ವಲ್‌ ದೇವರಾಜ್‌ ಚಿತ್ರದ ನಾಯಕ.ಪ್ರಿಯಾಂಕ ತಿಮ್ಮೇಶ್ ನಾಯಕಿ. ಚಿತ್ರಕ್ಕೆ ಸೆನ್ಸಾರ್‌ ಮಂಡಳಿ ಯು/ಎ ಪ್ರಮಾಣ ಪತ್ರ ನೀಡಿದೆ.

ಲಕ್ಕಿ ಶಂಕರ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರದಲ್ಲಿ ಏಳು ಸಾಹಸ ಸನ್ನಿವೇಶಗಳಿದೆ.
ಮಾಸ್ ಮಾದ ಸಾಹಸ ಸಂಯೋಜನೆ ಮಾಡಿದ್ದಾರೆ.

ಬಾಲಿವುಡ್‌ನ ರಾಹುಲ್ ದೇವ್, ಸ್ಪರ್ಶ ರೇಖ, ಸಾಧುಕೋಕಿಲ, ಕಡ್ಡಿಪುಡಿ ಚಂದ್ರು, ದೀಪಕ್ ಶೆಟ್ಟಿ, ದಿನೇಶ್ ಮಂಗಳೂರು, ಶೋಭತ್, ಜೀವನ್, ಹನುಮಂತೇ ಗೌಡ, ಮೋಹನ್ ಜುನೇಜ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಕವಿರಾಜ್, ರಾಘವೇಂದ್ರ ಕಾಮತ್, ಶಂಕರ್ ಅವರು ಚಿತ್ರದ ಹಾಡುಗಳನ್ನು ಬರೆದಿದ್ದು, ಧರ್ಮವಿಶ್ ಸಂಗೀತ ನೀಡಿದ್ದಾರೆ. ಜೈ ಆನಂದ್ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ ಈ ಚಿತ್ರಕ್ಕಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.