ADVERTISEMENT

35ನೇ ವಸಂತಕ್ಕೆ ಕಾಲಿಟ್ಟ ನಟ ಅರ್ಜುನ್‌ ಕಪೂರ್

​ಪ್ರಜಾವಾಣಿ ವಾರ್ತೆ
Published 26 ಜೂನ್ 2020, 8:30 IST
Last Updated 26 ಜೂನ್ 2020, 8:30 IST
ಅರ್ಜುನ್‌ ಕಪೂರ್‌
ಅರ್ಜುನ್‌ ಕಪೂರ್‌   

ಮುಂಬೈ: ಬಾಲಿವುಡ್ ನಟ ಅರ್ಜುನ್‌ಕಪೂರ್ ಇಂದು (ಜೂ.26) 35ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

ನಟಿ ಮಲೈಕಾ ಅರೋರಾ ಅವರೊಂದಿಗೆ ಎರಡು ವರ್ಷಗಳಿಂದ ಸಹ ಜೀವನ ನಡೆಸುತ್ತಿರುವ ಅರ್ಜುನ್‌ ತಮ್ಮ ನಿವಾಸದಲ್ಲಿ ಸರಳವಾಗಿ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದಾರೆ.

ಅರ್ಜುನ್‌ ಜನ್ಮದಿನಕ್ಕೆ ಅವರ ಕುಟುಂಬದವರು, ಬಾಲಿವುಡ್‌ ದಿಗ್ಗಜರು ಸೇರಿದಂತೆ ಅಭಿಮಾನಿಗಳು ಶುಭಾಶಯಗಳನ್ನು ಕೋರಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.