
ಅರ್ಜುನ್ ಸರ್ಜಾ ನಿರ್ದೇಶಿಸಿ, ಪ್ರಮುಖ ಪಾತ್ರವೊಂದರಲ್ಲಿ ನಟಿಸಿರುವ ‘ಸೀತಾ ಪಯಣ’ ಚಿತ್ರ ಫೆ.14ರಂದು ತೆರೆಗೆ ಬರಲಿದೆ. ತಮ್ಮ ಪುತ್ರಿ ಐಶ್ವರ್ಯಾಗಾಗಿ ಸರ್ಜಾ ಈ ಚಿತ್ರವನ್ನು ನಿರ್ದೇಶಿಸಿ, ನಿರ್ಮಿಸಿದ್ದಾರೆ. ಧ್ರುವ ಸರ್ಜಾ ಕೂಡ ಈ ಚಿತ್ರದ ವಿಶೇಷ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ.
ಉಪೇಂದ್ರ ಅಣ್ಣನ ಮಗ ನಿರಂಜನ್‌ಗೆ ಐಶ್ವರ್ಯಾ ಜೋಡಿಯಾಗಿದ್ದಾರೆ. ಸರ್ಜಾ ಈ ಹಿಂದೆ ‘ಜೈ ಹಿಂದ್’ ಮತ್ತು ‘ಅಭಿಮನ್ಯು’, ‘ಪ್ರೇಮಬರಹ’ ಸಿನಿಮಾಗಳಿಗೆ ಆ್ಯಕ್ಷನ್ ಕಟ್ ಹೇಳಿದ್ದರು.
‘ಶೀರ್ಷಿಕೆಯೇ ಸೂಚಿಸುವಂತೆ ಇದೊಂದು ಪಯಣದ ಕುರಿತಾದ ಚಿತ್ರವಾಗಿದ್ದು, ಅಭಿ ಮತ್ತು ಸೀತಾ ಎಂಬ ಹದಿಹರೆಯದವರ ಭಾವನಾತ್ಮಕ ಪಯಣವಿದೆ’ ಎಂದಿದೆ ಚಿತ್ರತಂಡ.
ಪ್ರಕಾಶ್ ರಾಜ್, ಸತ್ಯರಾಜ್ ಮುಂತಾದವರು ನಟಿಸಿದ್ದಾರೆ. ಅನೂಪ್ ರುಬೆನ್ಸ್ ಸಂಗೀತ, ಬಾಲಮುರುಗನ್ ಛಾಯಾಚಿತ್ರಗ್ರಹಣವಿದೆ. ‘ದೃಶ್ಯಂ’ ಸಿನಿಮಾ ಖ್ಯಾತಿಯ ಸಂಕಲನಕಾರ ಆಯೂಬ್ ಖಾನ್ ಈ ಚಿತ್ರಕ್ಕೆ ಸಂಕಲನದ ಜವಾಬ್ದಾರಿ ಹೊತ್ತಿದ್ದಾರೆ. ಕನ್ನಡ, ತೆಲುಗು ಸೇರಿದಂತೆ ಐದು ಭಾಷೆಗಳಲ್ಲಿ ಚಿತ್ರ ತೆರೆ ಕಾಣಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.