
ನವದೆಹಲಿ:ಬಡ ಮಕ್ಕಳ ಶ್ರೇಯೋಭಿವೃದ್ಧಿ ಹಾಗೂ ಎಂಇಇಆರ್ ಸಂಸ್ಥೆಯ ಮೂಲಕ ಹೆಣ್ಣುಮಕ್ಕಳ ಸಬಲೀಕರಣಕ್ಕೆ ಶ್ರಮಿಸಿರುವ ಹಾಗೂ ಸಿನಿಮಾ ರಂಗದಲ್ಲಿ ಮಾಡಿರುವ ಸಾಧನೆಯನ್ನು ಪರಿಗಣಿಸಿ ಬಾಲಿವುಡ್ ನಟ ಶಾರುಖ್ ಖಾನ್ ಅವರಿಗೆ ಆಸ್ಟ್ರೇಲಿಯಾದ ಲಾ ಟ್ರೋಬ್ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಲಿದೆ.
ಮೆಲ್ಬೊರ್ನ್‌ನಲ್ಲಿ ನಡೆಯಲಿರುವ ಭಾರತೀಯ ಚಲನಚಿತ್ರೋತ್ಸವದಲ್ಲಿ ಅವರಿಗೆ ಡಾಕ್ಟೇರ್ ನೀಡಿ ಗೌರವಿಸಲಾಗುವುದು ಎಂದು ವಿಶ್ವವಿದ್ಯಾಲಯ ತಿಳಿಸಿದೆ.
ವಿವಿ ಮಹಿಳೆಯರ ಸಮಾನತೆ ಪ್ರತಿಪಾದಿಸಿದೆ: ಶಾರುಖ್
ಇದಕ್ಕೆ ಪ್ರತಿಕ್ರಿಯಿಸಿರುವ ಶಾರುಖ್ ಖಾನ್, ಲಾ ಟ್ರೋಬ್ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪಡೆಯುತ್ತಿರುವುದು ಹೆಮ್ಮೆಯ ವಿಷಯ. ಈ ವಿವಿಯು ಮಹಿಳೆಯರ ಸಮಾನತೆಯನ್ನು ಪ್ರತಿಪಾದಿಸಿದೆ ಮತ್ತು ಭಾರತೀಯ ಸಂಸ್ಕೃತಿಯೊಂದಿಗೆ ಹಿಂದಿನಿಂದಲೂ ಒಡನಾಟ ಹೊಂದಿದೆ. ಈ ವಿವಿಯಿಂದ ಪುರಸ್ಕಾರ ಪಡೆಯುತ್ತಿರುವುದು ತುಂಬಾ ಸಂತಸ ತಂದಿದೆ ಮತ್ತು ನನ್ನನ್ನು ಈ ಪುರಸ್ಕಾರಕ್ಕೆ ಆಯ್ಕೆ ಮಾಡಿರುವುದಕ್ಕೆ ನಾನು ಆಭಾರಿಯಾಗಿದ್ದೇನೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.